ಕರಾವಳಿ

ಉಡುಪಿ ವಿಡಿಯೋ ಕೇಸ್‌ ಸಿಐಡಿ ತನಿಖೆಗೆ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

Pinterest LinkedIn Tumblr

ಉಡುಪಿ: ನಗರದ ಖಾಸಗಿ ಕಾಲೇಜಿನಲ್ಲಿ ನಡೆದಿದ್ದ ವೀಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ.

ಮೂವರು ಮುಸ್ಲಿಮ್ ವಿದ್ಯಾರ್ಥಿನಿಯರು ಕಾಲೇಜಿನ ಟಾಯ್ಲೆಟ್‍ನಲ್ಲಿ ಮೊಬೈಲ್ ಇರಿಸಿ ಹಿಂದೂ ಯುವತಿಯ ವಿಡೀಯೋ ಚಿತ್ರಿಕರಿಸಿದ್ದರು ಎಂಬ ಆರೋಪವಿದೆ. ಈ ವಿಚಾರವಾಗಿ ಕಾಲೇಜಿನ ಆಡಳಿತ ಮಂಡಳಿ ಮಂಡಳಿ ವಿದ್ಯಾರ್ಥಿನಿಯರಿಗೆ ಎಚ್ಚರಿಕೆ ನೀಡಿ ಕ್ರಮ ಕೈಗೊಂಡಿತ್ತು. ಬಳಿಕ ಈ ವಿಚಾರ ಬೆಳಕಿಗೆ ಬಂದಿದ್ದು ಮಲ್ಪೆ ಪೊಲೀಸ್ ಠಾಣೆಯಲ್ಲಿ ಜು.26ರಂದು ಸುಮೋಟೋ ಕೇಸ್ ದಾಖಲಾಗಿತ್ತು.

ಜುಲೈ 18 ರಂದು ನಡೆದಿದ್ದ ಘಟನೆ ರಾಜ್ಯದೆಲ್ಲೆಡೆ ಚರ್ಚೆಗೆ ಗ್ರಾಸವಾಗಿತ್ತು. ಈ ಸಂಬಂಧ ರಾಜ್ಯಾದ್ಯಂತ ಬಿಜೆಪಿ, ಎಬಿವಿಪಿ ಹಾಗೂ ಹಿಂದೂಪರ ಸಂಘಟನೆಗಳು ಘಟನೆಯನ್ನು ಖಂಡಿಸಿ ಭಾರೀ ಪ್ರತಿಭಟನೆ ನಡೆಸಿದ್ದವು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿಸಲಾಗಿತ್ತು. ಈ ಪ್ರಕರಣವನ್ನು ಎಸ್‍ಐಟಿ ತನಿಖೆ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯಪಾಲರಿಗೆ ಬಿಜೆಪಿ ಮನವಿ ಮಾಡಿತ್ತು.

ಮೊದಲಿಗೆ ಪ್ರಕರಣವನ್ನು ಮಲ್ಪೆ ವೃತ್ತ ನಿರೀಕ್ಷಕ ಮಂಜುನಾಥ ಗೌಡ ತನಿಖೆ ನಡೆಸುತ್ತಿದ್ದರು. ತನಿಖಾಧಿಕಾರಿಯ ಬದಲಾವಣೆ ಮಾಡುವಂತೆ ಒತ್ತಾಯ ಕೇಳಿ ಬಂದ ಬಳಿಕ ಪ್ರಕರಣವನ್ನು ಕುಂದಾಪುರ ಡಿವೈಎಸ್‍ಪಿ ಬೆಳ್ಳಿಯಪ್ಪ ಅವರಿಗೆ ಹಸ್ತಾಂತರಿಸಲಾಗಿತ್ತು. ಈಗ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿ ಆದೇಶ ಹೊರಡಿಸಿದೆ.

Comments are closed.