ಕರಾವಳಿ

ಶಾಲಾ ಮಕ್ಕಳಿಗೆ ಹಾಲು-ಮೊಟ್ಟೆ ವಿತರಣೆ ಕಾರ್ಯಕ್ರಮಕ್ಕೆ ಕುಂದಾಪುರದಲ್ಲಿ ಡಿಸಿ ಡಾ.ಕೆ. ವಿದ್ಯಾಕುಮಾರಿ ಚಾಲನೆ

Pinterest LinkedIn Tumblr

ಕುಂದಾಪುರ: ಪಿ.ಎಂ.ಪೋಷಣ್ ಅಕ್ಷರ ದಾಸೋಹ ಕಾರ್ಯಕ್ರಮದಡಿ ಶಾಲಾ ಮಕ್ಕಳಿಗೆ ಅಪೌಷ್ಠಿಕತೆ ಮತ್ತು ಅನಿಮಿಯ ನಿವಾರಣೆಗಾಗಿ ಸರ್ಕಾರಿ ಮತ್ತು ಅನುದಾನಿಕ ಶಾಲೆಗಳಲ್ಲಿ 1-10ನೇ ತರಗತಿ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಕುಂದಾಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಇಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಚಾಲನೆ ನೀಡಿದರು. ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಇದ್ದರು.

ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟದೊಂದಿಗೆ ಪೂರಕ ಪೌಷ್ಠಿಕ ಆಹಾರವಾಗಿ ಮೊಟ್ಟೆಯನ್ನು, ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿಯನ್ನು ವಿತರಿಸಲಾಗುತ್ತಿದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.

ಈ ವೇಳೆ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಇದ್ದರು.

Comments are closed.