ಉಡುಪಿ: ಜಿಲ್ಲೆಯ ಶಿರಿಯಾರ ಗ್ರಾ.ಪಂ. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸುಧೀಂದ್ರ ಶೆಟ್ಟಿ, ಉಪಾಧ್ಯಕ್ಷರಾಗಿ ಬಿಜೆಪಿಯ ಅಮಿತಾ ಅವಿರೋಧ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ-ಉಪಾಧ್ಯಕ್ಷರಿಗೆ ಮತ್ತೆ ಒಲಿದ ಅವಕಾಶ:
13 ಸಂಖ್ಯಾಬಲದ ಶಿರಿಯಾರ ಗ್ರಾ.ಪಂ.ನಲ್ಲಿ 11 ಬಿಜೆಪಿ ಬೆಂಬಲಿತರು, 2 ಕಾಂಗ್ರೆಸ್ ಸದಸ್ಯರಿದ್ದಾರೆ. ಪ್ರಥಮ ಅವಧಿಯಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ‘ಅ’ ಮಹಿಳೆಗೆ ಮೀಸಲಾಗಿತ್ತು. ಅಧ್ಯಕ್ಷರಾಗಿ ಸುಧೀಂದ್ರ ಶೆಟ್ಟಿ ಉಪಾಧ್ಯಕ್ಷರಾಗಿ ಅಮಿತಾ ಕಳೆದ ಅವಧಿಯಲ್ಲಿ ಕಾರ್ಯ ನಿರ್ವಹಿಸಿದ್ದರು. ಈ ಬಾರಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ‘ಬ’ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು, ಪ್ರಥಮ ಅವಧಿಯ ಅಧ್ಯಕ್ಷ ಉಪಾಧ್ಯಕ್ಷರೇ ಈ ಅವಧಿಗೂ ಪುನಃ ಆಯ್ಕೆಯಾಗಿರುವುದು ವಿಶೇಷವಾಗಿದೆ.
ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ರಂಗನಾಥ್ ಚುನಾವಣಾಧಿಕಾರಿಯಾಗಿ ಕಾವ್ಯ ನಿರ್ವಹಿಸಿದರು.
Comments are closed.