ಕರಾವಳಿ

ಅಕ್ರಮ ಮರಳುಗಾರಿಕೆ: ಮೂರು ವಾಹನ ವಶಕ್ಕೆ ಪಡೆದ ಗಂಗೊಳ್ಳಿ ಪಿಎಸ್ಐ ನೇತೃತ್ವದ ತಂಡ

Pinterest LinkedIn Tumblr

ಕುಂದಾಪುರ: ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಮೂರು ವಾಹನಗಳನ್ನು ಗಂಗೊಳ್ಳಿ ಪೊಲೀಸರು ವಶಕ್ಕೆ ಪಡೆದ ಘಟನೆ‌ ಆ.27 ರಾತ್ರಿ ನಡೆದಿದೆ.

ಠಾಣೆ ವ್ಯಾಪ್ತಿಯಲ್ಲಿ ಮರಳುಗಾರಿಕೆ ಅಕ್ರಮದ ಬಗ್ಗೆ ದೂರುಗಳು ಬಂದ ಹಿನ್ನೆಲೆ ಗಂಗೊಳ್ಳಿ ಪಿಎಸ್ಐ ಹರೀಶ್ ಆರ್. ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದು ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಸಂಬಂಧಪಟ್ಟ ವಾಹನಗಳನ್ನು ಮೊವಾಡಿ ಹಾಗೂ ತ್ರಾಸಿ ಪ್ರದೇಶದಲ್ಲಿ ವಶಕ್ಕೆ ಪಡೆದಿದ್ದು ಈ ಬಗ್ಗೆ ಮುಂದಿನ ಕ್ರಮ ವಹಿಸುವಂತೆ ಗಣಿ ಮತ್ತು ಭೂ ವಿಜ್ಞಾನಿ ಇಲಾಖೆಗೆ ಕೋರಿಕೆ ಪತ್ರ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

Comments are closed.