ಬೆಂಗಳೂರು: ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ವಿಧಾನಸಭಾ ಚುನಾವಣೆಯ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ಪಡೆದು ವಂಚಿಸಿರುವ ಪ್ರಕರಣದ ಮೂರನೇ ಆರೋಪಿಯಾಗಿರುವ ವಿಜಯನಗರ ಜಿಲ್ಲೆಯ ಹಿರೇಹಡಗಲಿ ತಾಲೂಕಿನ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಒಡಿಶಾದ ಕಟಕ್ ನಲ್ಲಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

(ಹಾಲಾಶ್ರೀ- ಸಂಗ್ರಹ ಚಿತ್ರ)

(ಉದ್ಯಮಿ ಗೋವಿಂದ ಪೂಜಾರಿ ಕಾರ್ಯಕ್ರಮದಲ್ಲಿ ಆರೋಪಿಗಳಾದ ಚೈತ್ರ, ಹಾಲಾಶ್ರೀ ಸ್ಚಾಮೀಜಿ)
ಚಲಿಸುತ್ತಿದ್ದ ರೈಲಿನಲ್ಲೇ ಹಾಲಶ್ರೀಯನ್ನು ಬಂಧಿಸಿರುವ ಪೊಲೀಸರು ಅಲ್ಲಿಂದ ಬೆಂಗಳೂರಿಗೆ ಕರೆ ತರುತ್ತಿದ್ದಾರೆ ಎನ್ನಲಾಗಿದೆ.
ಪ್ರಕರಣ ದಾಖಲಾಗುತ್ತಲೇ ಸ್ವಾಮಿಜಿ ತಲೆಮರೆಸಿಕೊಂಡಿದ್ದು ಪತ್ತೆಗೆ ಸಿಸಿಬಿ ಪೊಲೀಸರು ತಂಡ ರಚಿಸಿದ್ದರು. ಪ್ರಕರಣ ಸಂಬಂಧ 8 ಮಂದಿ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದ್ದು ಪ್ರಕರಣದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಪ್ರಮುಖ ಆರೋಪಿ.
Comments are closed.