ಕರ್ನಾಟಕ

ವಿಶ್ವವಿಖ್ಯಾತ ಮೈಸೂರು ದಸರಾ 2023 ಸಂಪನ್ನ; 750 ಕೆಜಿ ತೂಕದ ಚಿನ್ನದ ಅಂಬಾರಿ ಹೊತ್ತ ಅಭಿಮನ್ಯು

Pinterest LinkedIn Tumblr

ಮೈಸೂರು: ವಿಜಯದಶಮಿಯ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ, ಆಕರ್ಷಕ ಪಂಜಿನ ಕವಾಯತಿನೊಂದಿಗೆ ಕಳೆದ 10 ದಿನಗಳಿಂದ ನಡೆದ ವಿಶ್ವವಿಖ್ಯಾತ ಮೈಸೂರು ದಸರಾ 2023 ಸಂಪನ್ನಗೊಂಡಿತು.

ನಾಡದೇವತೆ ಚಾಮುಂಡೇಶ್ವರಿ ವಿರಾಜಮಾನರಾದ 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ಅರಮನೆ ಆವರಣದಿಂದ ಬನ್ನಿಮಂಟಪದವರೆಗೂ ಅಭಿಮನ್ಯು ಆನೆ ಯಶಸ್ವಿಯಾಗಿ ಹೊತ್ತು ಸಾಗಿತು. ಇತರ 14 ಗಜಪಡೆಗಳು ಅಭಿಮನ್ಯುವಿಗೆ ಸಾಥ್ ನೀಡಿದವು. ಕರ್ನಾಟಕದ ಅಶ್ವದಳ ಪೊಲೀಸರ ನೇತೃತ್ವದಲ್ಲಿ ಮೆರವಣಿಗೆ ನಡೆಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ,ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು. ಇದಕ್ಕೂ ಮುನ್ನ ಮುಖ್ಯಮಂತ್ರಿಗಳು ನಂದಿಧ್ವಜ ಪೂಜೆಯಲ್ಲಿ ಪಾಲ್ಗೊಳ್ಳುವುದರೊಂದಿಗೆ ಕಲಾತಂಡಗಳು, ಸ್ತಬ್ಧಚಿತ್ರಗಳ ಮರವಣಿಗೆ ಆರಂಭವಾಯಿತು.

ಅರಮನೆ ಮುಂಭಾಗದಿಂದ ನಡೆದ ಮೆರವಣಿಗೆಯಲ್ಲಿ ರಾಜ್ಯದ 31 ಜಿಲ್ಲೆಗಳು ಮತ್ತು ವಿವಿಧ ಪ್ರಮುಖ ಸರ್ಕಾರಿ ಇಲಾಖೆಗಳ ಭವ್ಯವಾದ ಸ್ತಬ್ಧಚಿತ್ರಗಳು ಆಕರ್ಷಣೀಯವಾಗಿದ್ದವು.

Comments are closed.