ಬೆಂಗಳೂರು: ಹುಲಿ ಉಗುರು ಧರಿಸಿದ್ದ ಪ್ರಕರಣದಲ್ಲಿ ಬಂಧಿಯಾಗಿದ್ದ ‘ಬಿಗ್ ಬಾಸ್ ಕನ್ನಡ’ ರಿಯಾಲಿಟಿ ಶೋ ಸ್ಪರ್ಧಿ ವರ್ತೂರು ಸಂತೋಷ್ ಅವರಿಗೆ ಜಾಮೀನು ಮಂಜೂರಾಗಿದೆ.

ಬೆಂಗಳೂರಿನ 2ನೇ ಎಸಿಜೆಎಂ ನ್ಯಾಯಾಲಯ ಜಾಮೀನು ನೀಡಿದೆ. ನಾಲ್ಕು ಸಾವಿರ ರೂಪಾಯಿ ನಗದು ಭದ್ರತೆ ಅಥವಾ ಒಬ್ಬರ ಶ್ಯೂರಿಟಿ ಒದಗಿಸುವಂತೆ ಷರತ್ತು ಹಾಕಲಾಗಿದೆ.
ವರ್ತೂರು ಸಂತೋಷ್ ಹಳ್ಳಿಕಾರ್ ತಳಿಯ ಹಸುಗಳ ಸಂರಕ್ಷಣೆ ಮಾಡುವ ಮೂಲಕ ಖ್ಯಾತಿ ಗಳಿಸಿದ್ದರು. ಅದೇ ಆಧಾರದಲ್ಲಿ ಅವರು ಬಿಗ್ ಬಾಸ್ಗೆ ಆಯ್ಕೆಯಾಗಿದ್ದರು. ಇನ್ನು ಬಿಗ್ ಬಾಸ್ ಮನೆಯಲ್ಲಿ ಸಂತೋಷ್ ಧರಿಸಿದ್ದ ಹುಲಿ ಉಗುರಿನ ಲಾಕೆಟ್ ವೈರಲ್ ಆಗಿತ್ತು. ಹೀಗಾಗಿ ಅರಣ್ಯಾಧಿಕಾರಿಗಳು ಅಕ್ಟೋಬರ್ 22ರ ರಾತ್ರಿ ಬಿಗ್ ಬಾಸ್ ಮನೆಗೆ ಹೋಗಿ ಅವರನ್ನು ಬಂಧಿಸಿದ್ದರು. ನಂತರ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
Comments are closed.