ಉಡುಪಿ: ಉಡುಪಿಯ ನೇಜಾರು ಎಂಬಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆರೋಪಿ ಅರುಣ್ ಚೌಗುಲೆ ಎಂಬಾತನನ್ನು ಪೊಲೀಸರು ಬಂಧಿಸಿದ್ದು ಕೋರ್ಟ್ಗೆ ಹಾಜರುಮಾಡಿದ್ದಾರೆ. ಆರೋಪಿ ಅರುಣ್ ಚೌಗುಲೆಗೆ 14 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಈ ಪ್ರಕರಣದ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ಪಿ ಡಾ. ಅರುಣ್ ಕೆ. ಅವರು, ಪ್ರವೀಣ್ ಚೌಗುಲೆ ಕೊಲೆಯನ್ನು ಒಪ್ಪಿಕೊಂಡಿದ್ದು ಕೊಲೆಗೆ ನಿಖರ ಕಾರಣ ವಿಚಾರಣೆಯಲ್ಲಿ ತಿಳಿದುಬರಲಿದೆ. ಕೊಲೆಗೆ ಮೂರ್ನಾಲ್ಕು ಕಾರಣಗಳು ಇರುವ ಸಾಧ್ಯತೆ ಇದೆ. ಸಂಪೂರ್ಣ ತನಿಖೆ ಮಾಡದೆ ಕಾರಣ ಹೇಳಲು ಸಾಧ್ಯವಿಲ್ಲ. ಅವನ ಉದ್ದೇಶ ಒಬ್ಬರನ್ನು ಕೊಲೆ ಮಾಡುವುದಾಗಿತ್ತು. ತಪ್ಪಿಸಿಕೊಳ್ಳಲು ಎಲ್ಲರನ್ನೂ ಕೊಲೆ ಮಾಡಿದ್ದಾನೆ. ಕೊಲೆ ಸಾಕ್ಷಿ ನಾಶ ಮಾಡಲು ಮೂವರ ಕೊಲೆ ಮಾಡಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿ ಪ್ರವೀಣ್ ಚೌಗುಲೆಗೆ ಮದುವೆಯಾಗಿತ್ತು. ತಾಂತ್ರಿಕ ಸಾಕ್ಷಿಗಳ ಸಂಗ್ರಹ ಮಾಡಿ ಬಂಧಿಸಿದ್ದೇವೆ. ತನಿಖೆಯಿಂದ ಸಂಪೂರ್ಣ ಮಾಹಿತಿ ಸಿಗಲಿದೆ ಎಂದರು.
Comments are closed.