ಕರ್ನಾಟಕ

ಬಿಜೆಪಿ ಶಾಸಕ ಆರ್. ಅಶೋಕ್ ವಿಪಕ್ಷ ನಾಯಕನಾಗಿ ಆಯ್ಕೆ

Pinterest LinkedIn Tumblr

ಬೆಂಗಳೂರು: ಪದ್ಮನಾಭನಗರ ಬಿಜೆಪಿ ಶಾಸಕ ಆರ್. ಅಶೋಕ್ ಅವರನ್ನು ವಿಪಕ್ಷ ನಾಯಕನಾಗಿ ಆಯ್ಕೆ ಮಾಡಲಾಗಿದೆ. ಶುಕ್ರವಾರ ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಗೌತಮ್ ಆಗಮಿಸಿದ್ದರು.

ಶಾಸಕರ ಅಭಿಪ್ರಾಯಗಳನ್ನು ಆಲಿಸಿದ ವೀಕ್ಷಕರು ವಿರೋಧದ ನಡುವೆಯೂ ವಿಪಕ್ಷ ನಾಯಕನಾಗಿ ಆರ್ ಅಶೋಕ್ ಅವರನ್ನು ನೇಮಿಸಿದ್ದಾರೆ.

ಈ ವೇಳೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಆರ್ ಅಶೋಕ್ ಅವರು, ಪಕ್ಷ ದೊಡ್ಡ ಜವಾಬ್ದಾರಿಯನ್ನು ನೀಡಿದೆ. ಅದನ್ನು ಸರಿಯಾಗಿ ನಿಭಾಯಿಸುತ್ತೇನೆ. ಸಾಮಾನ್ಯ ಕಾರ್ಯಕರ್ತನಾಗಿ 45 ವರ್ಷಗಳಿಂದ ಕೆಲಸ ಮಾಡಿದ್ದೇನೆ. ಕಾಂಗ್ರೆಸ್ ನ ದುರಾಳಿತವ್ನನು ಜನರ ಮುಂದಿಡಲು ಪ್ರಯತ್ನಿಸುತ್ತೇವೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 28 ಸ್ಥಾನಗಳನ್ನು ಗೆಲ್ಲುವ ಗುರಿ ಹಾಕಿಕೊಳ್ಳತ್ತೇವೆ ಎಂದು ಹೇಳಿದರು.

 

Comments are closed.