ಕರಾವಳಿ

ಮಾಜಿ ಪ್ರಧಾನಿ ಇಂದಿರಾಗಾಂಧಿ ಜನ್ಮ ದಿನಾಚರಣೆ: ಇಂದಿರಾ ಕ್ಯಾಂಟಿನ್’ನಲ್ಲಿ ಉಚಿತ ಉಪಹಾರ ವಿತರಿಸಿದ ಕುಂದಾಪುರ ಬ್ಲಾಕ್ ಕಾಂಗ್ರೆಸ್

Pinterest LinkedIn Tumblr

ಕುಂದಾಪುರ: ಬ್ಯಾಂಕ್ ರಾಷ್ಟ್ರೀಕರಣ, ಭೂ ಸುಧಾರಣೆ ಮತ್ತು ಗರೀಬಿ ಹಟಾವೋ ಮೂಲಕ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ದ ಭಾರತದ ಪ್ರಥಮ ಮಹಿಳಾ ಪ್ರಧಾನಿ ಇಂದಿರಾಗಾಂಧಿ. ಅವರ ದೂರ ದೃಷ್ಟಿಯ ಫಲವಾಗಿ ಇಂದು ದೇಶ ಮುಂದುವರಿದ ರಾಷ್ಟ್ರಗಳ ಸಾಲಿನಲ್ಲಿ ಅಗ್ರಗಣ್ಯವೆನಿಸಿಕೊಂಡಿದೆ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಹೇಳಿದರು.

ಮಾಜಿ ಪ್ರಧಾನಿ ಇಂದಿರಾಗಾಂಧಿ ಜನ್ಮ ದಿನಾಚರಣೆ ಅಂಗವಾಗಿ ಭಾನುವಾರ ಬೆಳಿಗ್ಗೆ ಕುಂದಾಪುರದ ಶಾಸ್ತ್ರಿ ಸರ್ಕಲ್ ನಲ್ಲಿರುವ ಇಂದಿರಾ ಕ್ಯಾಂಟೀನ್ ನಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಉಪಹಾರವನ್ನು ಬ್ಲಾಕ್ ಕಾಂಗ್ರೆಸ್ ವತಿಯಿಂದ ನೀಡಿ ಅವರು ಮಾತನಾಡಿದರು.

ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕಾಸ್ಟೋ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ದೇವಕಿ ಸಣ್ಣಯ್ಯ ,ಪುರಸಭೆ ಸದಸ್ಯರಾದ ಶ್ರೀಧರ್ ಶೇರಿಗಾರ, ಅಬು ಮಹಮ್ಮದ್, ಪ್ರಭಾವತಿ ಶೆಟ್ಟಿ, ಪಂಚಾಯತ್ ಸದಸ್ಯರಾದ ವಿಜಯಧರ್ ಕೆ.ವಿ , ಜಿಲ್ಲಾ ಸೋಶಿಯಲ್ ಮೀಡಿಯಾ ಅಧ್ಯಕ್ಷ ರೋಷನ್ ಶೆಟ್ಟಿ, ಎನ್.ಎಸ್.ಯು.ಐ ಅಧ್ಯಕ್ಷ ಸುಜನ್ ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ರೇವತಿ ಶೆಟ್ಟಿ, ಹಿರಿಯರಾದ ಗಂಗಾಧರ ಶೆಟ್ಟಿ ,ಬ್ಲಾಕ್ ಕಾಂಗ್ರೆಸ್ ಉಪಸಮಿತಿಗಳ ಅಧ್ಯಕ್ಷರಾದ ಚಂದ್ರ ಅಮೀನ್, ಅಶ್ವತ್ ಕುಮಾರ್ , ಮುನಾಫ ಕೋಡಿ, ಐಟಿ ಸೆಲ್‌ನ ಚಂದ್ರಶೇಖರ್ ಶೆಟ್ಟಿ,, ನ್ಯಾಯವಾದಿ ಸಚ್ಚಿದಾನಂದ್, ಆಶಾ ಕರ್ವಾಲ್ಲೊ , ಕುಮಾರ ಖಾರ್ವಿ, ಜ್ಯೋತಿ ನಾಯ್ಕ್ , ಅಶೋಕ್ ಸುವರ್ಣ, ಶೋಭಾ ಸಚ್ಚಿದಾನಂದ, ಕೇಶವ ಭಟ್ ಮೊದಲಾದವರಿದ್ದರು.

Comments are closed.