ಕರ್ನಾಟಕ

ಗೃಹಲಕ್ಷ್ಮೀ ಯೋಜನೆಯ 3 ಕಂತಿನ ಹಣ ಬಾರದವರಿಗೆ ಏಕಕಾಲಕ್ಕೆ ಆರು ಸಾವಿರ ಹಾಕುವ ಪ್ರಕ್ರಿಯೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Pinterest LinkedIn Tumblr

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಉಂಟಾಗಿರುವ ಸಣ್ಣಪುಟ್ಟ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ ಸಿಗಲಿದ್ದು, ಇದಕ್ಕಾಗಿ ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಅದಾಲತ್ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಬಾಲ ಭವನದಲ್ಲಿ ಗುರುವಾರ ನಡೆದ ಮಕ್ಕಳ ದಿನಾಚರಣೆ ಸಮಾರಂಭದ ಬಳಿಕ ಮಾತನಾಡಿದ ಸಚಿವರು, ಈಗಾಗಲೇ 1 ಕೋಟಿ 10 ಲಕ್ಷ ಮಹಿಳೆಯರಿಗೆ ಈ ಯೋಜನೆ ತಲುಪಿದ್ದು, ಪಿಡಿಓ , ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಬಾಕಿ ಉಳಿದಿರುವ ಫಲಾನುಭವಿಗಳಿಗೆ ಆಯಾ ಪಂಚಾಯಿತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಸಭೆನಡೆಸಿ ಹಣ ಹಾಕುವ ವ್ಯವಸ್ಥೆ ಮಾಡಲಾಗುವುದು ಎಂದರು.

ಈಗಾಗಲೇ ಮೂರು ಕಂತಿನ ದುಡ್ಡು ಬಾರದೇ ಇದ್ದವರಿಗೆ ಏಕಕಾಲಕ್ಕೆ ಆರು ಸಾವಿರ ದುಡ್ಡು ಹಾಕುವ ಪ್ರಕ್ರಿಯೆ ನಡೆಯುತ್ತಿದೆ ಎಂದರು. ಗೃಹಲಕ್ಷ್ಮಿ ಯೋಜನೆಗೆ ಸುಮಾರು 50 ಸಾವಿರ ತೆರಿಗೆದಾರರು ಕೂಡ ಅರ್ಜಿ ಹಾಕಿದ್ದು, ಅರ್ಜಿಗಳನ್ನು ನಿರಾಕರಿಸಿ ಡಿಲೀಟ್ ಮಾಡಲಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

Comments are closed.