ಪ್ರಮುಖ ವರದಿಗಳು

ಬೆಂಗಳೂರು ಹೆಚ್ಎಎಲ್’ನಲ್ಲಿ ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಪ್ರಧಾನಿ ಮೋದಿ

Pinterest LinkedIn Tumblr

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಬೆಂಗಳೂರಿನಲ್ಲಿ ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ಗೆ(ಎಚ್.ಎ.ಎಲ್) ಭೇಟಿ ನೀಡಿದ ಸಂದರ್ಭದಲ್ಲಿ ತೇಜಸ್ ಲಘು ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದರು.

ಹೆಚ್ಎಎಲ್ ಉತ್ಪಾದನಾ ಘಟಕದಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲಿಸಲು ಪ್ರಧಾನಮಂತ್ರಿ ಅವರು ಬೆಂಗಳೂರಿಗೆ ಆಗಮಿಸಿದ್ದರು. ತೇಜಸ್ ಯುದ್ಧ ವಿಮಾನ ಸೇರಿದಂತೆ ಹೆಚ್ಎಎಲ್‌ನ ಉತ್ಪಾದನಾ ಸೌಲಭ್ಯವನ್ನು ಪ್ರಧಾನಿಯವರು ಸುಮಾರು 45 ನಿಮಿಷಗಳ ಕಾಲ ಪರಿಶೀಲನೆ ನಡೆಸಿದರು.

ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಬಳಿಕ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು, ಇಂದು ತೇಜಸ್‌ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದೆ. ನಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಮನೋಭಾವದಿಂದಾಗಿ ಸ್ವಾವಲಂಬನೆಯ ಕ್ಷೇತ್ರದಲ್ಲಿ ಜಗತ್ತಿನ ಯಾವ ದೇಶಕ್ಕಿಂತ ನಾವು ಕಡಿಮೆಯಿಲ್ಲವೆಂದು ಹೆಮ್ಮೆಯಿಂದ ಹೇಳಬಲ್ಲೆ. ಭಾರತೀಯ ವಾಯುಪಡೆ, ಡಿಆರ್ ಡಿಒ ಮತ್ತು ಹೆಚ್ಎಎಲ್ ಮತ್ತು ಎಲ್ಲಾ ಭಾರತೀಯರಿಗೆ ಮನದಾಳದ ಅಭಿನಂದನೆಗಳು.

ತೇಜಸ್‌ ಯುದ್ಧ ವಿಮಾನದಲ್ಲಿ ಒಂದು ಪಯಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಅನುಭವ ವಿಸ್ಮಯಕಾರಿಯಾಗಿತ್ತು. ನಮ್ಮ ದೇಶದ ರಕ್ಷಣಾ ಕ್ಷೇತ್ರದಲ್ಲಿ ಸ್ಥಳೀಯ ಉತ್ಪನ್ನಗಳ ಸಾಮರ್ಥ್ಯಗಳಲ್ಲಿ ನನ್ನ ವಿಶ್ವಾಸ ಖಂಡಿತಾ ಹೆಚ್ಚಾಗಿದೆ. ನಮ್ಮ ರಾಷ್ಟ್ರದ ಸಾಮರ್ಥ್ಯದ ಬಗ್ಗೆ ನನ್ನಲ್ಲಿ ಹೆಮ್ಮೆಯ ಭಾವ ಮತ್ತು ಆಶಾಭಾವನೆ ಹೆಚ್ಚಾಗಿದೆ ಎಂದಿದ್ದಾರೆ.

Comments are closed.