ಕರ್ನಾಟಕ

ಯುವ ಮತದಾರರ ಸೆಳೆಯಲು 5ನೇ ಗ್ಯಾರಂಟಿ ‘ಯುವನಿಧಿ’ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ

Pinterest LinkedIn Tumblr

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷ, ಯುವ ಮತದಾರರ ಮನ ಗೆಲ್ಲಲು ಮಂಗಳವಾರ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಚಾಲನೆ ನೀಡುತ್ತಿದೆ.

ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ.

ಡಿಸೆಂಬರ್ ತಿಂಗಳ 26ರಂದು ಯುವ ನಿಧಿ ಯೋಜನೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಸಲುವಾಗಿನ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.

ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ವತಿಯಿಂದ ಯುವನಿಧಿ ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಎಂಬ ಶೀರ್ಷಿಕೆಯಡಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ಇನ್ನು ರಾಷ್ಟ್ರ ಕವಿ, ಯುವ ಸಮುದಾಯದ ಸ್ಪೂರ್ತಿ ಕುವೆಂಪುರವರ ಪುಣ್ಯಭೂಮಿ ಶಿವಮೊಗ್ಗದಲ್ಲಿ 2024ರ ಜನವರಿ 12ರಂದು ಈ ಯೋಜನೆಗೆ ಚಾಲನೆ ನೀಡಲು ಸರ್ಕಾರ ಸಿದ್ದತೆ ಮಾಡಿಕೊಂಡಿದೆ.

Comments are closed.