ಪ್ರಮುಖ ವರದಿಗಳು

ತಮಿಳು ಚಿತ್ರರಂಗದ ಸೂಪರ್ ಸ್ಟಾರ್, ಡಿಎಂಡಿಕೆ ನಾಯಕ ವಿಜಯಕಾಂತ್ ವಿಧಿವಶ

Pinterest LinkedIn Tumblr

ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ನಟ ಹಾಗೂ ರಾಜಕಾರಣಿ ವಿಜಯಕಾಂತ್ ಇಂದು ಗುರುವಾರ ನಿಧನ ಹೊಂದಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು.

ಕಳೆದ ಕೆಲ ದಿನಗಳ ಹಿಂದೆ ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನ ಹೊಂದಿದ್ದಾರೆ.

ವಿಜಯಕಾಂತ್ ಅವರು 154 ಚಿತ್ರಗಳಲ್ಲಿ ನಟಿಸಿದ್ದಾರೆ. ಚಲನಚಿತ್ರಗಳ ನಂತರ ರಾಜಕೀಯಕ್ಕೆ ಸೇರಿದ ಅವರು ಡಿಎಂಡಿಕೆ ಸ್ಥಾಪಿಸಿದರು, ಎರಡು ಬಾರಿ ವಿಧಾನಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದರು. ಅವರು 2011 ರಿಂದ 2016 ರವರೆಗೆ ತಮಿಳುನಾಡು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದರು.

Comments are closed.