ಕರ್ನಾಟಕ

ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Pinterest LinkedIn Tumblr

ತುಮಕೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಬುಧವಾರ ರಾತ್ರಿ ತಡರಾತ್ರಿ ಸುಮಾರಿಗೆ ತುಮಕೂರಿನ ನಂದಿಹಳ್ಳಿಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಸಚಿವರು ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಅವರಿದ್ದ ಕಾರು ಮತ್ತು ಲಾರಿಯೊಂದರ ನಡುವೆ ಢಿಕ್ಕಿ ಸಂಭವಿಸಿದೆ. ಇದರಿಂದ ಕಾರಿನ ಮುಂಭಾಗ ಜಖಂಗೊಂಡಿದೆ. ಕಾರಿನಲ್ಲಿ ಸಚಿವರು ಸೇರಿ ಮೂವರು ಪ್ರಯಾಣಿಸುತ್ತಿದ್ದು, ಎಲ್ಲರೂ ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ. ಬಳಿಕ ಬದಲಿ ವಾಹನ ವ್ಯವಸ್ಥೆ ಮಾಡಿಕೊಂಡು ಸಚಿವರು ಬೆಂಗಳೂರಿಗೆ ತೆರಳಿದ್ದಾರೆ.

ಈ ಬಗ್ಗೆ ಕ್ಯಾತಸಂದ್ರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.