ಕರಾವಳಿ

ಉಡುಪಿ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ; ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಅರ್ಜಿ ವಜಾ

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ನೇಜಾರು ಎಂಬಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್‌ ಚೌಗುಲೆ ಸಲ್ಲಿಸಿರುವ ಜಾಮೀನು ಅರ್ಜಿ ತಿರಸ್ಕೃತವಾಗಿದೆ.

ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶನಿವಾರ ಜಾಮೀನು ಅರ್ಜಿ ತಿರಸ್ಕರಿಸಿ ಆದೇಶ ನೀಡಿದೆ.

ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಕೋರಿ ಡಿ.14ರಂದು ತನ್ನ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದ. ಈ ಅರ್ಜಿಗೆ ಸರಕಾರಿ ಅಭಿಯೋಜಕ ಪ್ರಕಾಶ್‌ಚಂದ್ರ ಶೆಟ್ಟಿ ಬೇಳೂರು ಆಕ್ಷೇಪಣೆ ಸಲ್ಲಿದ್ದರು.

ಈ ಕುರಿತು ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರಾದ ದಿನೇಶ್ ಹೆಗ್ಡೆ ಆರೋಪಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ.

Comments are closed.