ಕರಾವಳಿ

ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕ ಜಾಗೃತಿಗಾಗಿ ಕುಂದಾಪುರದಲ್ಲಿ ಪೊಲೀಸರಿಂದ ‘ವಾಕ್ ಆಂಡ್ ರನ್’

Pinterest LinkedIn Tumblr

ಕುಂದಾಪುರ: ಮಾದಕ ವ್ಯಸನದ ಜಾಗೃತಿ ಕಾರ್ಯಕ್ರಮದಲ್ಲಿ ಯುವ ಸಮುದಾಯ ತೊಡಗಿಸಿಕೊಳ್ಳಲು ಪೊಲೀಸ್ ಇಲಾಖೆ ಅವಕಾಶ ಕಲ್ಪಿಸಿದೆ. ಮಾದಕ ವಸ್ತುವಂತ ಸಾಮಾಜಿಕ ಪಿಡುಗನ್ನು ತಡೆಗಟ್ಟಲು ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕೆಂದು ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶರು ಹಾಗೂ ಕುಂದಾಪುರ ತಾಲೂಕು ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿ ಶೃತಿಶ್ರೀ ಎಸ್. ಹೇಳಿದರು.

ಉಡುಪಿ ಜಿಲ್ಲಾ ಪೊಲೀಸ್ ಕುಂದಾಪುರ ಉಪವಿಭಾಗದ ವತಿಯಿಂದ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕ ಜಾಗೃತಿಗಾಗಿ ‘ಸೇ ನೋ ಟು ಡ್ರಗ್ಸ್’ ಧ್ಯೇಯ ವಾಕ್ಯದಡಿ ರವಿವಾರ ಬೆಳಿಗ್ಗೆ ನಡೆದ ‘ವಾಕ್ ಆಂಡ್ ರನ್’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕುಂದಾಪುರ ತಹಶಿಲ್ದಾರ್ ಶೋಭಾಲಕ್ಷ್ಮೀ ಎಚ್.ಎಸ್ ಮಾತನಾಡಿ, ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಜನತೆ ಜಾಗೃತರಾಗಬೇಕು ಎಂದರು. ಕುಂದಾಪುರ ಆರ್.ಎನ್ ಶೆಟ್ಟಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ನವೀನ್ ಕುಮಾರ್ ಶೆಟ್ಟಿ ಮಾತನಾಡಿ, ಜೀವ ತೆಗೆಯುವ ಮಾದಕ ವಸ್ತುಗಳಿಂದ ಎಲ್ಲರೂ ದೂರವಿರಬೇಕು. ಆನ್‌ಲೈನ್ ಮೂಲಕ ಇಂತಹ ವಸ್ತುಗಳನ್ನು ಖರೀದಿಸುವ ಬಗ್ಗೆ ಇಲಾಖೆ ಕ್ರಮವಹಿಸಬೇಕು. ಇಂತಹ ಕಾರ್ಯಕ್ರಮಗಳ ಮೂಲಕ ಜಾಗೃತಿ ಸಾಧ್ಯ ಎಂದರು.

ಕುಂದಾಪುರ ಡಿವೈಎಸ್ಪಿ ಕೆ.ಯು. ಬೆಳ್ಳಿಯಪ್ಪ, ಕುಂದಾಪುರ ನಗರ ಠಾಣೆ ಇನ್ಸ್‌ಪೆಕ್ಟರ್ ನಂದಕುಮಾರ್, ಗ್ರಾಮಾಂತರ ಠಾಣೆ ವೃತ್ತನಿರೀಕ್ಷಕ ಜಯರಾಮ‌ ಡಿ. ಗೌಡ, ಕುಂದಾಪುರ ಉಪವಿಭಾಗದ ವಿವಿಧ ಠಾಣೆಯ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.

Comments are closed.