ಕರಾವಳಿ

ಬೈಂದೂರು ಮಾಜಿ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ..!

Pinterest LinkedIn Tumblr

ಕುಂದಾಪುರ: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜಕೀಯದಲ್ಲಿ ಒಂದಷ್ಟ ಮಹತ್ವದ ಬದಲಾವಣೆಗಳು ನಡೆಯುತ್ತಿದೆ. ಇಂದು ಮಾ.12 ರಂದು ಬೈಂದೂರಿನ ಬಿಜೆಪಿ ಮಾಜಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿಯವರು ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳಲಿದ್ದಾರೆ.

ಬೆಂಗಳೂರಿನಲ್ಲಿ ಸೋಮವರ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಈ ತೀರ್ಮಾನ ಮಾಡಿದ್ದು ಮಂಗಳವಾರ ಸಂಜೆ ಬೆಂಗಳೂರಿನಲ್ಲಿ ಅಧೀಕೃತ ಪಕ್ಷ ಸೇರ್ಪಡೆ ಖಾತ್ರಿಯಾಗಿದೆ.

ಕಳೆದ ಅವಧಿಯಲ್ಲಿ ಬಿ.ಎಂ. ಸುಕುಮಾರ ಶೆಟ್ಟಿಯವರು ಬೈಂದೂರು ಶಾಸಕರಾಗಿದ್ದರು. 2023 ವಿಧಾನಸಭಾ ಚುಮಾವಣೆಯಲ್ಲಿ ಬಿಜೆಪಿ ಅವರಿಗೆ ಟಿಕೆಟ್ ನೀಡಿರಲಿಲ್ಲ. ಇದಾದ ಬಳಿಕ ಸುಕುಮಾರ ಶೆಟ್ಟಿಯವರು ಬಿಜೆಪಿ ಪಕ್ಷದಿಂದ ದೂರವಿದ್ದರು. ಬಳಿಕ ಅವರು ಕಾಂಗ್ರೆಸ್ ಸೇರ್ಪಡೆಯ ಬಗ್ಗೆ ಮಾತುಗಳು ಕೇಳಿಬಂದಿದ್ದು ಇದಕ್ಕೆ ಪೂರಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸಹಿತ ಕೆಲವು ಸಚಿವರನ್ನು ಭೇಟಿಯಾಗಿದ್ದರು.

ಸೋಮವಾರ ಸುರ್ಜೇವಾಲ ಅವರ ಭೇಟಿ ಸಂದರ್ಭದಲ್ಲಿ ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ, ಮುಖಂಡರಾದ ಆಯನೂರು ಮಂಜುನಾಥ್‌, ಸುಧೀರ್‌ ಕುಮಾರ್‌ ಮರೋಳಿ ಮೊದಲಾದವರಿದ್ದರು.

ಪ್ರಮುಖ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ. ಮಂಗಳವಾರ ಕಾಂಗ್ರೆಸ್ ಸೇರ್ಪಡೆಯಾಗಲಿದ್ದು ಪಕ್ಷದ ಮುಂದೆ ಯಾವುದೇ ಬೇಡಿಕೆಯಿಟ್ಟಿಲ್ಲ.
– ಬಿ.ಎಂ. ಸುಕುಮಾರ ಶೆಟ್ಟಿ, ಬೈಂದೂರು ಮಾಜಿ ಶಾಸಕರು

Comments are closed.