ಕರ್ನಾಟಕ

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್‌!

Pinterest LinkedIn Tumblr

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸಂತ್ರಸ್ತೆ ಅಪ್ರಾಪ್ತ ಬಾಲಕಿಯ ತಾಯಿ ದೂರಿನ ಮೇರೆಗೆ ಮಾಜಿ ಸಿಎಂ ಬಿ‌.ಎಸ್.ಯಡಿಯೂರಪ್ಪ ವಿರುದ್ದ ಎಫ್ಐಆರ್ ದಾಖಲಿಸಲಾಗಿದೆ. ಸದಾಶಿವನಗರ ಪೊಲೀಸ್ ಠಾಣೆಗೆ ಅಪ್ರಾಪ್ತೆಯ ತಾಯಿ ದೂರು ನೀಡಿದ್ದು ಫೋಕ್ಸೋ ಕಾಯ್ದೆ ಸೆಕ್ಷನ್ 8, ಮತ್ತು ಐಪಿಸಿ ಸೆಕ್ಷನ್ 354(ಎ) ಅಡಿ ಪ್ರಕರಣ ದಾಖಲಾಗಿದೆ.

17 ವರ್ಷದ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಕಳೆದ ರಾತ್ರಿ ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಕಳೆದ ಫೆಬ್ರುವರಿ 2ರಂದು ಸಹಾಯ ಕೇಳಲು ಹೋಗಿದ್ದ ವೇಳೆ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಎಫ್ಐಆರ್‌ನಲ್ಲಿ ಉಲ್ಲೇಖ ಮಾಡಲಾಗಿದೆ.

ಅಪ್ರಾಪ್ತೆಯ ಮೇಲೆ ಈ ಹಿಂದೆ ಆಗಿದ್ದ ಅತ್ಯಾಚಾರದ ಬಗ್ಗೆ ಸಹಾಯ ಕೇಳಲು ತೆರಳಿದ್ದಾಗ ಘಟನೆ ನಡೆದಿದೆ. ಮೊದಲಿಗೆ ಮಾತನಾಡಿದ್ದ ಮಾಜಿ ಸಿಎಂ ಯಡಿಯೂರಪ್ಪ ಬಳಿಕ ಅಪ್ರಾಪ್ತೆಯನ್ನು ರೂಂ ಒಳಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದರಾರೆಂದು ಆರೋಪಿಸಲಾಗಿದೆ. ಈ ವಿಚಾರವನ್ನ ಯಾರಿಗೂ ಹೇಳಬಾರದೆಂದು ಹೆದರಿಸಿ ನಮ್ಮನ್ನ ತಡೆದಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.

Comments are closed.