ಕರಾವಳಿ

ಧರ್ಮ ಯುದ್ಧಕ್ಕೂ ಮುನ್ನ ಧರ್ಮಸ್ಥಳ ಮಂಜುನಾಥ, ಅಣ್ಣಪ್ಪ ಸ್ವಾಮಿ ದರ್ಶನ ಪಡೆದಿರುವೆ: ಡಿ.ಕೆ ಶಿವಕುಮಾರ್

Pinterest LinkedIn Tumblr

ಮಂಗಳೂರು: ಯಾವಾಗಲೂ ಧರ್ಮ ಯುದ್ಧದಲ್ಲಿ ಮಂಜುನಾಥನ ದರ್ಶನ ಪಡೆಯುತ್ತೇನೆ. ಅದೇ ರೀತಿ ಈ ಬಾರಿಯೂ ಇಲ್ಲಿಗೆ ಬಂದಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮೀ ದೇಗುಲಕ್ಕೆ ಮಂಗಳವಾರ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನ್ನ ಜೀವನದಲ್ಲಿ ಮಂಜುನಾಥ, ಈಶ್ವರ, ಗಂಗಾಧರ ಅಜ್ಜ ರಕ್ಷಣೆ ಮಾಡಿಕೊಂಡು ಬಂದಿದ್ದಾರೆ. ಹಾಗಾಗಿ ಈ ಯುದ್ಧ ಆರಂಭಿಸುವ ಮುನ್ನ ಮಂಜುನಾಥ ಸ್ವಾಮಿ, ಅಣ್ಣಪ್ಪಸ್ವಾಮಿ ದರ್ಶನ ಮಾಡಿ ಆಶೀರ್ವಾದ ಪಡೆದು ಹೋಗುವ ಪದ್ಧತಿ, ಪರಂಪರೆ ಇಟ್ಟುಕೊಂಡಿದ್ದೇನೆ ಎಂದರು.

ನಾನು ರೂಢಿ ಮಾಡಿಕೊಂಡಿರುವ ಪದ್ಧತಿಯಂತೆ ಇವತ್ತು ಇಲ್ಲಿಗೆ ಬಂದು ಮಂಜುನಾಥನ ದರ್ಶನ ಪಡೆದು ಹೊರಡುತ್ತಿದ್ದೇನೆ. ಮಂಜುನಾಥ ಸ್ವಾಮಿ ಧರ್ಮಸ್ಥಳದ ಶಕ್ತಿ. ಆತ ಮಾತು ಬಿಡದ ಮಂಜುನಾಥ. ನಾವು ಪಂಚ ಗ್ಯಾರೆಂಟಿಗಳನ್ನು ನೀಡಿ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ಇನ್ನೂ ಹೆಚ್ಚಿಗೆ ಶಕ್ತಿ ಕೊಡಿ ಎಂದು ಆ ಭಗವಂತನಲ್ಲಿ ಪ್ರಾರ್ಥನೆ ಮಾಡಲು ಬಂದಿದ್ದೇನೆ. ನುಡಿದಂತೆ ನಡೆಯಲು ಆ ದೇವರು ಶಕ್ತಿ ಕೊಟ್ಟಿದ್ದಾನೆ, ಇದು ನಮ್ಮ ಭಾಗ್ಯ. ಇನ್ನು ಜನ ತೀರ್ಮಾನ ಮಾಡುತ್ತಾರೆ ಎಂದರು.

 

 

Comments are closed.