ಕರಾವಳಿ

ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

Pinterest LinkedIn Tumblr

ಉಡುಪಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಇಂದು ನಾಮಪತ್ರ ಸಲ್ಲಿಸಿದರು.

ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ಸಮಾವೇಶದ ಬಳಿಕ ಮುಖಂಡರ ಜೊತೆ ತೆರಳಿದ ಜಯಪ್ರಕಾಶ್ ಹೆಗ್ಡೆ ಅವರಿಂದ ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರು ನಾಮಪತ್ರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸಚಿವ ಕೆ.ಜೆ.ಜಾರ್ಜ್, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಮೋಟಮ್ಮ, ಚಿಕ್ಕಮಗಳೂರು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಅಂಶುಮಂತ್ ಇದ್ದರು.

ನಾಮಪತ್ರ ಸಲ್ಲಿಕೆಗೂ ಮೊದಲು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಕಾರ್ಯಕರ್ತರ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಕೆ.ಜಯಪ್ರಕಾಶ್ ಹೆಗ್ಡೆ ಅವರು, ಕರಾವಳಿ, ಮಲೆನಾಡು, ಬಯಲು ಸೀಮೆಯ ಸಮಸ್ಯೆ ಪರಿಹಾರಕ್ಕೆ ಮೊದಲ ಆದ್ಯತೆ ಲೋಕಸಭಾ ಚುನಾವಣೆಯಲ್ಲಿ ಸಂಸದನಾಗಿ ಆಯ್ಕೆಯಾದರೆ ಕರಾವಳಿ, ಮಲೆನಾಡು ಹಾಗೂ ಬಯಲು ಸೀಮೆ ಭಾಗದ ಸಮಸ್ಯೆಗಳ ಪರಿಹಾರಪರಿಹಾರಕ್ಕೆ ಪ್ರಥಮ ಆದ್ಯತೆ ನೀಡುವುದಾಗಿ ಹೇಳಿದರು.

 

Comments are closed.