ಕರಾವಳಿ

ಕುಂದಾಪುರ: ಮನೆಯಲ್ಲಿ ಯಾರೂ ಇಲ್ಲದ ವೇಳೆ 44 ಗ್ರಾಂ. ಚಿನ್ನಾಭರಣ ಕಳವುಗೈದ ಪ್ರಕರಣದ ಆರೋಪಿ ಬಂಧನ

Pinterest LinkedIn Tumblr

ಕುಂದಾಪುರ: ತಾಲೂಕಿನ ಕೋಣಿ ಎಂಬಲ್ಲಿನ ಮನೆಯೊಂದರಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿ ಕಪಾಟಿನಲ್ಲಿದ್ದ 44 ಗ್ರಾಂ ತೂಕದ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.

ಕೋಣಿ ಗ್ರಾಮದ ವಿಜಯ (34) ಬಂಧಿತ ಆರೋಪಿಯಾಗಿದ್ದು ಈತನಿಂದ ಕಳವಾದ ಒಟ್ಟು 44 ಗ್ರಾಂ ತೂಕದ ಸುಮಾರು 2 ಲಕ್ಷದ 64 ಸಾವಿರ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಪ್ರಕರಣದ ಹಿನ್ನೆಲೆ: ಕುಂದಾಪುರ ತಾಲೂಕು ಕೋಣಿಯ ಮನೆಯೊಂದರ ಕಪಾಡಿನಲ್ಲಿ 44 ಗ್ರಾಂ ತೂಕದ ಚಿನ್ನಾಭರಣಗಳನ್ನಿಟ್ಟು ಕುಟುಂಬ ಬೆಂಗಳೂರಿಗೆ  ಹೋಗಿದ್ದು, ವಾಪಾಸ್ ಬಂದು ನೋಡಿದಾಗ  ಚಿನ್ನಾಭರಣಗಳನ್ನು ಕಳವು ಮಾಡಿರುವುದು ತಿಳಿದುಬಂದಿದೆ. ಈ ಬಗ್ಗೆ ಮಾ.31ರಂದು ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಕಳವು ಆರೋಪಿ ಪತ್ತೆ ಬಗ್ಗೆ ಸ್ಥಳೀಯ ಬಾತ್ಮೀದಾರರ ಮಾಹಿತಿ ಕಲೆಹಾಕಿದ ಕುಂದಾಪುರ ಪೊಲೀಸರ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್.ಟಿ ಸಿದ್ದಲಿಂಗಪ್ಪ, ಪರಮೇಶ್ವರ ಹೆಗಡೆ ಮಾರ್ಗದರ್ಶನದಲ್ಲಿ ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು ನೇತೃತ್ವದಲ್ಲಿ ಕುಂದಾಪುರ ಠಾಣೆಯ ಪೊಲೀಸ್ ನಿರೀಕ್ಷಕ ಯು.ಬಿ. ನಂದಕುಮಾರ, ಪಿಎಸ್ಐಗಳಾದ ವಿನಯ್ ಎಂ. ಕೊರ್ಲಹಳ್ಳಿ, ಪ್ರಸಾದ್ ಕುಮಾರ್ ಕೆ., ಸಿಬ್ಬಂದಿಗಳಾದ ಸಂತೋಷ ಕುಮಾರ್, ಶ್ರೀಧರ್, ರಾಮ ಪೂಜಾರಿ  ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.

Comments are closed.