ಕರಾವಳಿ

ಬಿಜೆಪಿಯವರು ಹಿಂದುಳಿದ ವರ್ಗದವರ ವಿರೋಧಿಗಳು: ಕಾಂಗ್ರೆಸ್ ಮುಖಂಡ ಜಿ.ಎ ಬಾವಾ

Pinterest LinkedIn Tumblr

ಬೈಂದೂರು: ಬಿಜೆಪಿಯಲ್ಲಿ ಹಿಂದುಳಿದ ವರ್ಗಗಳ ನಾಯಕರಿಗೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಪಕ್ಷಕ್ಕಾಗಿ ದುಡಿದವರನ್ನೇ ದೂರವಿಡಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಲೋಕಸಭಾ ಚುನಾವಣೆಯ ಬೈಂದೂರು ಉಸ್ತುವಾರಿ ಜಿ.ಎ ಬಾವಾ ಆರೋಪಿಸಿದ್ದಾರೆ.

ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದ ವೇಳೆ ಮಾಧ್ಯಮಕ್ಕೆ ಹೇಳಿಕೆ ನೀಡಿರುವ ಅವರು,
ಬಿಜೆಪಿ ಪಕ್ಷವು ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡುತ್ತಲೇ ಬಂದಿದೆ. ಬೈಂದೂರು ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಿದ ಮಾಜಿ ಶಾಸಕ ಗೋಪಾಲ ಪೂಜಾರಿಯವರನ್ನು ಸೋಲಿಸಿದ್ದು ಪಕ್ಕದ ಕ್ಷೇತ್ರದ ಅಭ್ಯರ್ಥಿ ಹಾಗೂ ಇಲ್ಲಿನ ಅಭ್ಯರ್ಥಿ ಎಂದು ನೇರವಾಗಿ ಆರೋಪಿಸಿದರು. ಈ ಹಿಂದೆ ಕೇಂದ್ರದ ಬಿಜೆಪಿ ಸರ್ಕಾರ ಸ್ವಾತಂತ್ರೋತ್ಸವ ಪರೇಡ್ ವೇಳೆ ನಾರಾಯಣ ಗುರುಗಳ ಟ್ಯಾಬ್ಲೋವನ್ನು ಕೈಬಿಟ್ಟರು, ನಾರಾಯಣ ಗುರುಗಳ ಪಠ್ಯವನ್ನೂ ಕೈಬಿಟ್ಟು ಇಡೀ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದೆ. ಆ ಸಂದರ್ಭದಲ್ಲಿ ಸಚಿವರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರೂ ಮೌನ ವಹಿಸಿದ್ದರು ಎಂದರು.

ಶಿವಮೊಗ್ಗದಲ್ಲಿ ಹಿಂದುಳಿದ ವರ್ಗಗಳ ನಾಯಕ ಈಶ್ವರಪ್ಪ ಅವರನ್ನು ಅವಮಾನಿಸಿದರೆ, ಅತ್ತ ದೆಹಲಿಯಲ್ಲಿ ಹಿಂದುಳಿದ ವರ್ಗಕ್ಕೆ ಸೇರಿರುವ ಕೇಜ್ರಿವಾಲ್ ಅವರನ್ನೂ ಬಿಜೆಪಿ ಸರ್ಕಾರ ಜೈಲಿಗಟ್ಟಿದೆ. ಈ ಮೂಲಕ ಹಿಂದುಳಿದ ವರ್ಗದವರ ವಿರುದ್ಧ ನಿರಂತರ ದೌರ್ಜನ್ಯ ನಡೆಯುತ್ತಿದೆ ಎಂದು ಜಿ.ಎ.ಬಾವಾ ಆರೋಪಿಸಿದರು.

Comments are closed.