ಕರಾವಳಿ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಕೆ

Pinterest LinkedIn Tumblr

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು.

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ನಾಮಪತ್ರ ಸ್ವೀಕರಿಸಿದರು. ಈ ವೇಳೆ ಗೀತಾ ಅವರ ಪತಿ ನಟ ಶಿವರಾಜಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ, ಬೇಳೂರು ಗೋಪಾಲಕೃಷ್ಣ, ಬೈಂದೂರು ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಬಿ.ಎಂ ಸುಕುಮಾರ ಶೆಟ್ಟಿ, ಬೈಂದೂರು ಭಾಗದ ಮುಖಂಡರಾದ ಎಸ್. ರಾಜು ಪೂಜಾರಿ, ಉದಯಕುಮಾರ್ ಶೆಟ್ಟಿ ವಂಡ್ಸೆ ಸಹಿತ ಹಲವು ನಾಯಕರು ಇದ್ದರು.

ಗೀತಾ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಭಾರಿ ಸಂಖ್ಯೆಯಲ್ಲಿ ಬೆಂಬಲಿಗರು ಜಮಾಯಿಸಿದ್ದರು.

Comments are closed.