ಕರ್ನಾಟಕ

ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದ ತನಿಖೆಗೆ ಎಸ್ಐಟಿ ರಚನೆ- ಸಿಎಂ

Pinterest LinkedIn Tumblr

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪದ ವೀಡಿಯೋ ಕುರಿತ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಟ್ವಿಟರ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಸಿಎಂ, ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವೀಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಅವರ ಮನವಿಗೆ ಸ್ಪಂದಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿರುವ ವಿಡಿಯೊ ದೃಶ್ಯಾವಳಿಗಳ ತುಣುಕುಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ತನಿಖೆ ನಡೆಸಬೇಕು ಎಂಬ ಆಗ್ರಹ ವ್ಯಕ್ತವಾಗಿತ್ತು.

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಗುರುವಾರ ಪತ್ರ ಬರೆದು, ಹಾಸನ ಜಿಲ್ಲೆಯ ಪ್ರಭಾವಿ ರಾಜಕಾರಣಿಯೊಬ್ಬ ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಅದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು ಬೆದರಿಕೆ ಹಾಕುತ್ತಿರುವ ಆರೋಪದ ಬಗ್ಗೆ ತನಿಖೆ ನಡೆಸಲು ಎಸ್‌ಐಟಿ ರಚಿಸುವಂತೆ ಶಿಫಾರಸು ಮಾಡಿದ್ದರು.

Comments are closed.