ಕರಾವಳಿ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಭಾಜಪಾ ಅಭ್ಯರ್ಥಿ ಬಿ.ವೈ ರಾಘವೇಂದ್ರ ಪರ ಬೈಂದೂರು ಕ್ಷೇತ್ರದಲ್ಲಿ ಪ್ರಚಾರಕ್ಕಿಳಿದ ಕುಂದಾಪುರ ಶಾಸಕ ಕಿರಣ್ ಕೊಡ್ಗಿ

Pinterest LinkedIn Tumblr

ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರ ಚುನಾವಣೆ ಹಿನ್ನೆಲೆ ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಅವರಿಂದ ಗುಜ್ಜಾಡಿ ತ್ರಾಸಿ ವ್ಯಾಪ್ತಿಯ ಕಾರ್ಯಕರ್ತರೊಂದಿಗೆ ಸಮಾಲೋಚನೆ ಸಭೆ ನಡೆಯಿತು.

ಬಿ.ವೈ ರಾಘವೇಂದ್ರರವರು ಈಗಾಗಲೇ ಅವರ ಎರಡು ಅವಧಿಯಲ್ಲಿ ಬೈಂದೂರು ಕ್ಷೇತ್ರಕ್ಕೆ ಹಲವು ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ. ನಿರಂತರ ಸಂಚಾರ ಮಾಡುತ್ತ ಎಲ್ಲರ ಕೆಲಸಗಳನ್ನು ಮಾಡುತ್ತ ಜನ ಮಾನಸದಲ್ಲಿದ್ದಾರೆ. ಮತದಾರರು ಅವರನ್ನ ಮೂರನೇ ಬಾರಿಗೆ ರಾಜ್ಯದಿಂದ ಲೋಕಸಭೆಗೆ ನಮ್ಮೆಲ್ಲರ ನೆಚ್ಚಿನ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ನರೇಂದ್ರ ಮೋದಿಜೀ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವುದಲ್ಲದೆ‌ ಅಭ್ಯರ್ಥಿ ಬಿ.ವೈ ರಾಘವೇಂದ್ರ* ಅವರನ್ನು ಅತ್ಯಂತ ಹೆಚ್ಚಿ‌ನ ಮತಗಳ ಅಂತರದಿಂದ ಗೆಲ್ಲಿಸೋಣ ಎಂದರು.

ಈ ಸಂದರ್ಭದಲ್ಲಿ ಮಂಗಳೂರು ಬಿಜೆಪಿ ಸಹಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಸದಾನಂದ ಉಪ್ಪಿನಕುದ್ರು, ಗ್ರಾಮ ಪಂಚಾಯತ್ ಅಧ್ಯಕ್ಷ ಮಿಥುನ್ ದೇವಾಡಿಗ ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Comments are closed.