ಕರ್ನಾಟಕ

ಸಂತ್ರಸ್ತೆ ಕಿಡ್ನಾಪ್ ಕೇಸ್, ಮಧ್ಯಂತರ ನಿರೀಕ್ಷಣಾ ಜಾಮೀನು ಸಿಗದ ಬೆನ್ನಲ್ಲೇ ಹೆಚ್‌.ಡಿ ರೇವಣ್ಣ ಬಂಧನ

Pinterest LinkedIn Tumblr

ಬೆಂಗಳೂರು: ಅಪಹರಣ ಪ್ರಕರಣದಲ್ಲಿ ಹೊಳೆನರಸೀಪುರ ಜೆಡಿಎಸ್ ಶಾಸಕ ಹೆಚ್‌.ಡಿ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಮಧ್ಯಂತರ ನಿರೀಕ್ಷಣಾ ಜಾಮೀನು ವಜಾಗೊಳಿಸಿದ್ದು ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಮೇ 6ಕ್ಕೆ ಮುಂದೂಡಿದೆ.

ಮಧ್ಯಂತರ ನಿರೀಕ್ಷಣಾ ಜಾಮೀನು ವಜಾಗೊಳ್ಳುತ್ತಿದ್ದಂತೆ ಹೆಚ್.ಡಿ ರೇವಣ್ಣಗೆ ಬಂಧನದ ಭೀತಿ ಶುರುವಾಗಿತ್ತು. ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ನಿವಾಸಕ್ಕೆ ಎಸ್ಐಟಿ ಅಧಿಕಾರಿಗಳು ಆಗಮಿಸಿದ್ದರು.

ದೇವೇಗೌಡರ ಮನೆಯಲ್ಲಿ ರೇವಣ್ಣ ಅವರು ಇರಬಹುದು ಎಂದು ಶಂಕಿಸಿರುವ ಅಧಿಕಾರಿಗಳು ಮನೆಯ ಮುಂಬಾಗಿಲು ಹಾಗೂ ಹಿಂಬಾಗಿಲಿನಲ್ಲಿ ನಿಂತುಕೊಂಡಿದ್ದರು. ರೇವಣ್ಣ ಮನೆಯಿಂದ ಹೊರಬರುತ್ತಿದ್ದಂತೆ ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

Comments are closed.