ಕರ್ನಾಟಕ

ಹೆಚ್.ಡಿ ರೇವಣ್ಣರನ್ನು ಹೆಚ್ಚಿನ ವಿಚಾರಣೆಗೆ 4 ದಿನ ಎಸ್ಐಟಿ ಕಸ್ಟಡಿಗೆ ಒಪ್ಪಿಸಿದ ನ್ಯಾಯಾಲಯ

Pinterest LinkedIn Tumblr

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜೆಡಿಎಸ್ ಹಿರಿಯ ನಾಯಕ ಹೆಚ್. ಡಿ. ರೇವಣ್ಣ ಅವರನ್ನು ನ್ಯಾಯಾಲಯ 4 ದಿನಗಳ ಕಾಲ ಎಸ್ ಐಟಿ ಕಸ್ಟಡಿಗೆ ನೀಡಿದೆ.

ಮೈಸೂರಿನ ಕೆ.ಆರ್. ನಗರದಲ್ಲಿ ದಾಖಲಾಗಿದ್ದ ಮಹಿಳೆ ಅಪಹರಣ ಪ್ರಕರಣದಲ್ಲಿ ನಿನ್ನೆ ಬಂಧನಕ್ಕೊಳಗಾಗಿದ್ದ ರೇವಣ್ಣ ಅವರನ್ನು ಭಾನುವಾರ ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ಕೋರಮಂಗಲದಲ್ಲಿರುವ ನಿವಾಸದಲ್ಲಿ ನ್ಯಾಯಾಧೀಶರ ರವೀಂದ್ರ ಕಟ್ಟಿಮನಿ ಅವರ ಮುಂದೆ ಹಾಜರುಪಡಿಸಲಾಯಿತು.

ಈ ವೇಳೆ ಹೆಚ್. ಡಿ. ರೇವಣ್ಣ ಪರ ವಕೀಲರು ವಾದ ಹಾಗೂ ಎಸ್ ಐಟಿ ಮನವಿಯನ್ನು ನ್ಯಾಯಾಧೀಶರು ಆಲಿಸಿದ್ದಾರೆ. ಈ ಪ್ರಕರಣದಲ್ಲಿ ಹೆಚ್ಚಿನ ತನಿಖೆಗಾಗಿ ರೇವಣ್ಣ ಅವರನ್ನು ವಶಕ್ಕೆ ನೀಡಬೇಕೆಂದು ಎಸ್ಐಟಿ ನ್ಯಾಯಾಧೀಶರ ಬಳಿ ಮನವಿ ಮಾಡಿಕೊಂಡಿತು. ನಂತರ ನ್ಯಾಯಾಧೀಶರು ಮೇ.8ರವರೆಗೂ ರೇವಣ್ಣ ಅವರನ್ನು ಎಸ್ಐಟಿ ವಶಕ್ಕೆ ನೀಡಿ ಆದೇಶ ಹೊರಡಿಸಿದರು.

Comments are closed.