ಕರಾವಳಿ

ಮೇ.7 ಲೋಕಸಭಾ ಚುನಾವಣೆ ಹಿನ್ನೆಲೆ; ಮತಯಂತ್ರ-ಪರಿಕರಗಳೊಂದಿಗೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆಗೆ ತೆರಳಿದ ಅಧಿಕಾರಿಗಳು

Pinterest LinkedIn Tumblr

ಬೈಂದೂರು: ರಾಜ್ಯದಲ್ಲಿ ನಡೆಯುತ್ತಿರುವ ಎರಡನೇ ಹಂತದ ಲೋಕಸಭಾ ಚುನಾವಣೆ ಹಿನ್ನೆಲೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಸೇರುವ ಬೈಂದೂರು ವಿಧಾನಸಭಾ ಕ್ಷೇತ್ರದ ಡಿಮಸ್ಟ್ರಿಂಗ್ ಕೇಂದ್ರದಲ್ಲಿ ಚುನಾವಣಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಮತಯಂತ್ರ ಸೇರಿದಂತೆ ಮತ್ತಿತರ ಪರಿಕರಗಳನ್ನು ಪಡೆದು ಸೋಮವಾರ ಮತಗಟ್ಟೆಗೆ ತೆರಳಿದರು.

ಮಂಗಳವಾರ ಮತದಾನ ಪ್ರಕ್ರಿಯೆ ನಡೆಯಲಿದ್ದು ಸೋಮವಾರ ಬೆಳಿಗ್ಗೆನಿಂದ ಮತಯಂತ್ರಗಳನ್ನು ಸಂಬಙದಪಟ್ಟವರಿಗೆ ವಿತರಿಸುವ ಕಾರ್ಯ ನಡೆದಿದ್ದು ಮಧ್ಯಾಹ್ನದ ವೇಳೆ ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳ ಸಹಿತ ಪೊಲೀಸರು ಆಯಾಯ ಮತಗಟ್ಟೆಗೆ ತೆರಳಿದರು.

ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಕೆ., ಉಪವಿಭಾಗದ ಸಹಾಯಕ ಕಮಿಷನರ್ ರಶ್ಮೀ ಎಸ್.ಆರ್. ಹಾಗೂ ಸಂಬಂದಪಟ್ಟ ಅಧಿಕಾರಿಗಳಿದ್ದರು.

Comments are closed.