ಕರ್ನಾಟಕ

ಮೇ.9 (ನಾಳೆ) ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ

Pinterest LinkedIn Tumblr

ಬೆಂಗಳೂರು: ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ ಎಂದು ಅಧೀಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

https://karresults.nic.in ಜಾಲತಾಣದಲ್ಲಿ ನಾಳೆ ಬೆಳಗ್ಗೆ 10.30ರ ನಂತರ ಫಲಿತಾಂಶ ವೀಕ್ಷಿಸಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಕರ್ನಾಟಕ ಸರ್ಕಾರದ ಎಸ್.ಎಸ್.ಎಲ್.ಸಿ ಪರೀಕ್ಷೆ 2024 ಮಾರ್ಚ್ 25 ರಿಂದ ಏಪ್ರಿಲ್ 6ರ ನಡುವೆ ನಡೆಯಿತು. ಈ ಬಾರಿ ಎಸ್ಎಸ್‌ಎಲ್‌ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ 4.41 ಲಕ್ಷ ಬಾಲಕರು, 4.28 ಬಾಲಕಿಯರಿದ್ದರು. ಇದಲ್ಲದೆ, 18,225 ಖಾಸಗಿ ವಿದ್ಯಾರ್ಥಿಗಳು, 41,375 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 5,424 ವಿಭಿನ್ನ ಸಾಮರ್ಥ್ಯದ ವಿದ್ಯಾರ್ಥಿಗಳು ಕೂಡ ಇವರಲ್ಲೇ ಸೇರಿಕೊಂಡು ಪರೀಕ್ಷೆ ಬರೆದಿದ್ದಾರೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು.

Comments are closed.