ಕರಾವಳಿ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಅವರ ಅಧ್ಯಕ್ಷತೆಯಲ್ಲಿ ಬುಧವಾರ ಉಡುಪಿ ಬ್ರಹ್ಮಗಿರಿಯ ಐಎಂಎ ಭವನದಲ್ಲಿ ಜರಗಿತು.

ಸಂಘದ ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ವಾಚಿಸಿದರು. ಲೆಕ್ಕಪತ್ರವನ್ನು ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಮಂಡಿಸಿ ದರು. ಈ ಸಂದರ್ಭದಲ್ಲಿ ಸಂಘದ 2024-25ನೇ ಸಾಲಿನ ಗುರುತಿನ ಚೀಟಿ ಯನ್ನು ವಿತರಿಸಲಾಯಿತು.

ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಹರೀಶ್ ಕುಂದರ್ ಹಾಗೂ ದತ್ತಿನಿಧಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ನಟರಾಜ್ ಮಲ್ಪೆ ಅವರನ್ನು ಸನ್ಮಾನಿಸಲಾಯಿತು. ಸಂಘದ ಸದಸ್ಯರುಗಳಿಗೆ ಅಪಘಾತ ವಿಮೆಯ ಬಾಂಡ್ ಮತ್ತು ಮಿಡಿಯಾ ಸ್ಟಿಕ್ಕರ್‌ಗಳನ್ನು ವಿತರಿಸಲಾಯಿತು.

ವೇದಿಕೆಯಲ್ಲಿ ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು, ಉಪಾಧ್ಯಕ್ಷ ಬಾಲಕೃಷ್ಣ ಪೂಜಾರಿ ಉಚ್ಚಿಲ, ಕಾರ್ಯದರ್ಶಿಗಳಾದ ರಹೀಂ ಉಜಿರೆ, ರಾಜೇಶ್ ಅಚ್ಲಾಡಿ, ಪ್ರಮೋದ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು

Comments are closed.