ಕರ್ನಾಟಕ

ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ; ಶೇ. 73.40 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ; ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Pinterest LinkedIn Tumblr

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ 2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಂಡಿದೆ.

ಈ ಬಾರಿಯ ಪರೀಕ್ಷೆಯಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಉಡುಪಿ ಜಿಲ್ಲೆ ಮೊದಲ ಸ್ಥಾನ ಪಡೆದಿದ್ದರೆ, ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಉಡುಪಿ ಜಿಲ್ಲೆಯಲ್ಲಿ 94% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಯಾದಗಿರಿ ಕೊನೆ ಸ್ಥಾನ ಪಡೆದಿದೆ.

ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು. ಈ ಬಾರಿ ಮಾರ್ಚ್​ 25 ರಿಂದ ಏಪ್ರಿಲ್​ 6ರವರೆಗೆ ಪರೀಕ್ಷೆ ನಡೆದಿತ್ತು, ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು 8.69 ಲಕ್ಷ ವಿದ್ಯಾರ್ಥಿಗಳು ಬರೆದಿದ್ದರು.

ಕರ್ನಾಟಕದಲ್ಲಿ ಈ ಸಲ ಎಸ್ಎಸ್‌ಎಲ್‌ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 4.41 ಲಕ್ಷ ಬಾಲಕರು, 4.28 ಬಾಲಕಿಯರು. ಅಲ್ಲದೆ, 18,225 ಖಾಸಗಿ ವಿದ್ಯಾರ್ಥಿಗಳು, 41,375 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 5,424 ವಿಭಿನ್ನ ಸಾಮರ್ಥ್ಯದ ವಿದ್ಯಾರ್ಥಿಗಳು ಕರ್ನಾಟಕದ 2,750 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು.

 

Comments are closed.