ಕರ್ನಾಟಕ

ಪ್ರಜ್ವಲ್ ಅಶ್ಲೀಲ ವೀಡಿಯೋ ಪ್ರಕರಣ: ನ್ಯಾಯವಾದಿ ದೇವರಾಜೇಗೌಡ ಅರೆಸ್ಟ್

Pinterest LinkedIn Tumblr

ಚಿತ್ರದುರ್ಗ: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯವಾದಿ ದೇವರಾಜೇಗೌಡರನ್ನು ಚಿತ್ರದುರ್ಗ ಜಿಲ್ಲೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹೊಳೇನರಸೀಪುರ ಬಿಜೆಪಿ ನಾಯಕರೂ ಆಗಿರುವ ದೇವರಾಜೇಗೌಡ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಜಾತಿನಿಂದನೆ ಪ್ರಕರಣ ಹೊಳೇನರಸೀಪುರದಲ್ಲಿ ದಾಖಲಾದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಯಿಲಾಳು ಟೋಲ್‌ ಬಳಿ ಬೆಂಗಳೂರು ಕಡೆಯಿಂದ ಕಾರಿನಲ್ಲಿ ಬರುತ್ತಿದ್ದಾಗ ಹಿರಿಯೂರು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಸನ ಜಿಲ್ಲೆ ಹೊಳೆನರಸೀಪುರ ಪೊಲೀಸರು ದೇವರಾಜೇಗೌಡ ಮೊಬೈಲ್‌ ನೆಟ್‌ ವರ್ಕ್‌ ಆಧರಿಸಿ ಹಿರಿಯೂರು ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದರು ಎನ್ನಲಾಗಿದೆ.

ಸದ್ಯ ದೇವರಾಜೇಗೌಡ ಹಿರಿಯೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿದ್ದು, ಹೊಳೆನರಸೀಪುರ ಪೊಲೀಸರಿಗೆ ಹಸ್ತಾಂತರ ಮಾಡುವ ಸಾಧ್ಯತೆ ಇದೆ.
ದೇವರಾಜೇಗೌಡ ಮೇಲೆ ಲೈಂಗಿಕ ಕಿರುಕುಳದ ಆರೋಪವಿದೆ. ಏಪ್ರಿಲ್ 1 ರಂದು ಎಫ್‌ಐಆರ್ ದಾಖಲಾಗಿತ್ತು. ಪ್ರಕರಣ ಇತ್ತೀಚೆಗೆ ಬೆಳಕಿಗೆ ಬಂದಿದ್ದು, ಏಪ್ರಿಲ್ 1 ರಂದು ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ. ದೇವರಾಜೇಗೌಡ ತಮ್ಮ ಮನೆಗೆ ನುಗ್ಗಿ ಬೆದರಿಕೆ ಹಾಕಿದ್ದಾರೆ ಮತ್ತು ನಿಂದಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯ ಪತಿ ಮಾರ್ಚ್ 30 ರಂದು ದೂರು ದಾಖಲಿಸಿದ್ದಾರೆ.

 

Comments are closed.