ಪ್ರಮುಖ ವರದಿಗಳು

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ ಅವರಿಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ ಕೋರ್ಟ್

Pinterest LinkedIn Tumblr

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲು ಪಾಲಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಕೊನೆಗೂ ಸುಪ್ರೀಂ ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದ್ದು, ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಕೊನೆಗೂ ಜಾಮೀನು ದೊರಕಿದೆ.

ಜೂನ್ 1 ರವರೆಗೆ ಅವರಿಗೆ ಮಧ್ಯಂತರ ಜಾಮೀನು ನೀಡಿದ್ದು, ಇದರಿಂದ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಕೇಜ್ರಿವಾಲ್ ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಲು ಅವಕಾಶ ಸಿಕ್ಕಂತಾಗಿದೆ.

ಸುಪ್ರೀಂ ಕೋರ್ಟ್ ನೀಡಿರುವ ಮಧ್ಯಂತರ ಜಾಮೀನಿಂದ ಹೊರಬಂದಿರುವ ಅರವಿಂದ್ ಕೇಜ್ರಿವಾಲ್ ಅವರು ಆಡಳಿತಕ್ಕೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಭಾಗವಹಿಸಲು ಅವಕಾಶವಿಲ್ಲ. ಮುಂದಿನ 20 ದಿನ ಅವರು ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಪ್ರಚಾರ ಕಾರ್ಯಗಳಲ್ಲಿ ಭಾಗವಹಿಸಬಹುದಾಗಿದೆ.

ಜೂನ್ 1ರಂದು ಲೋಕಸಭೆ ಚುನಾವಣೆಯ ಕೊನೆಯ ಹಾಗೂ ಏಳನೇ ಹಂತದ ಚುನಾವಣೆ ನಡೆಯಲಿದೆ. ಅಲ್ಲಿಯವರೆಗೂ ಕೇಜ್ರಿವಾಲ್ ಅವರು ಚುನಾವಣೆಗೆ ಸಂಬಂಧಿಸಿದ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗಬಹುದು. ಜೂನ್ 2ರಂದು ಅವರು ಜೈಲಿನ ಅಧಿಕಾರಿಗಳ ಮುಂದೆ ಶರಣಾಗಬೇಕು ಎಂದು ಕೋರ್ಟ್ ಸೂಚನೆ ನೀಡಿದೆ.

Comments are closed.