ಕರ್ನಾಟಕ

ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ತ್ರಿಬಲ್ ಮರ್ಡರ್ ಪ್ರಕರಣದ ಆರೋಪಿ ರೌಡಿ ಶೀಟರ್ ಶೋಹಿಬ್ ಕಾಲಿಗೆ ಗುಂಡೇಟು

Pinterest LinkedIn Tumblr

ಶಿವಮೊಗ್ಗ: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಬೀರನಕೆರೆ ಬಳಿ ಘಟನೆ ನಡೆದಿದೆ.

ಶಿವಮೊಗ್ಗದಲ್ಲಿ ನಡೆದಿದ್ದ ತ್ರಿಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿ ರೌಡಿ ಶೀಟರ್ ಶೋಹಿಬ್ ನನ್ನು ಬಂಧಿಸಲು ಬೀರನಕೆರೆಗೆ ಹೋದ ಪಿಎಸ್ಐ ಕುಮಾರ್ ಹಾಗೂ ಹೆಡ್ ಕಾನ್ಸ್‌ಟೇಬಲ್ ಅಣ್ಣಪ್ಪ ಮೇಲೆ ಶೋಹಿಬ್ ಹಲ್ಲೆಗೆ ಯತ್ನಿಸಿದ್ದಾನೆ ಈ ವೇಳೆ ಪೊಲೀಸರು ಶೋಹಿಬ್ ಕಾಲಿಗೆ ಗುಂಡು ಹಾರಿಸಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಘಟನೆ ನಡೆದಿದ್ದು ಸದ್ಯ ಶೋಹಿಬ್ ಪೊಲೀಸರ ವಶದಲ್ಲಿದ್ದಾನೆ.

Comments are closed.