ಕರ್ನಾಟಕ

ಅಪಘಾತದ ವೇಳೆ ಜೊತೆಗಿದ್ದ ಮೃತ ನಟಿ‌ ಪವಿತ್ರಾ ಜಯರಾಮ್ ಗೆಳೆಯ ಚಂದು ಆತ್ಮಹತ್ಯೆ

Pinterest LinkedIn Tumblr

ಹೈದರಾಬಾದ್: ಕೆಲ ದಿನಗಳ ಹಿಂದೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ ನಟಿ ಪವಿತ್ರಾ ಜಯರಾಮ್ ಸಾವಿನ ಬೆನ್ನಲ್ಲೇ ಅವರೊಂದಿಗೆ ಅಂದು ಕಾರಿನಲ್ಲಿದ್ದ ಗೆಳೆಯ ಚಂದು ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಅಂದು ಅಪಘಾತದಲ್ಲಿ ನಟಿ ಪವಿತ್ರಾ ಜಯರಾಮ್ ಜೊತೆಗಿದ್ದ ಗೆಳೆಯ ಚಂದು ಹೈದರಾಬಾದ್ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಪವಿತ್ರಾ ಜಯರಾಮ್​ ಜೊತೆ ಚಂದು ಆಪ್ತವಾಗಿದ್ದರು. ಪವಿತ್ರಾ ನಿಧನದ ಬಳಿಕ ತೀವ್ರ ದುಃಖಕ್ಕೆ ಒಳಗಾಗಿದ್ದ ಚಂದು ಅವರು ಹೈದರಾಬಾದ್​ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ತೆಲುಗಿನ ಹಲವು ಧಾರಾವಾಹಿಗಳಲ್ಲಿ ಚಂದು ನಟಿಸುತ್ತಿದ್ದು, ಕೆಲ ಧಾರಾವಾಹಿಗಳಲ್ಲಿ ಚಂದು ಕೂಡ ಪವಿತ್ರಾರೊಂದಿಗೆ ನಟಿಸಿದ್ದರು. ಪವಿತ್ರಾ ಸಾವಿನ ಬಳಿಕ ಹೈದರಾಬಾದ್​​​ನ ಮಣಿಕೊಂಡದಲ್ಲಿರುವ ಮನೆಯಲ್ಲಿ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ.

2015ರಲ್ಲಿ ಶಿಲ್ಪಾಳನ್ನು ಪ್ರೀತಿಸಿ ಚಂದು ಮದುವೆ ಆಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ನಟಿ ಪವಿತ್ರಾ ಜಯರಾಮ್​ ಅವರ ಸಾವಿನಿಂದ ಮನನೊಂದು ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಹೈದರಾಬಾದ್​ನ ನಾರಸಿಂಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Comments are closed.