ಕರಾವಳಿ

ಶಾಸಕ ಹರೀಶ್‌ ಪೂಂಜಾ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್‌!

Pinterest LinkedIn Tumblr

ಬೆಳ್ತಂಗಡಿ: ಪೊಲೀಸರಿಗೆ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಅಕ್ರಮ ಕಲ್ಲು ಕ್ವಾರಿ ಹಾಗೂ ಸ್ಪೋಟ ಚಟುವಟಿಕೆ ಕೇಸ್ ನಲ್ಲಿ ರೌಡಿ ಶೀಟರ್ ಹಾಗೂ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರನ್ನು ಬಂಧಿಸಿದ ವೇಳೆ ಠಾಣೆಗೆ ಬಂದ ಶಾಸಕರು, ತಮ್ಮ ಪಕ್ಷದ ಕಾರ್ಯಕರ್ತನಾದ ಶಶಿರಾಜ್ ಶೆಟ್ಟಿಯನ್ನು ಕಾನೂನುಬಾಹಿರವಾಗಿ ಬಿಡುಗಡೆ ಮಾಡುವಂತೆ ಪೊಲೀಸ್ ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಆರೋಪಿಯನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ. ಅಸಂವಿಧಾನಿಕ ಪದ ಬಳಸಿ, ಅವಾಚ್ಯವಾಗಿ ಬೈದು ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಬಗ್ಗೆ ಶಾಸಕ ಹರೀಶ್ ಪೂಂಜ ಅವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಐಪಿಸಿ ಕಲಂ 353,504ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಹಿಂದೆ ಕಳಂಜೆದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸಿದ ವೇಳೆ ಅದನ್ನು ತಡೆದ ಘಟನೆ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜ ಅವರ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆಯೂ ಪ್ರಕರಣ ದಾಖಲಿಸಲಾಗಿತ್ತು.

 

Comments are closed.