ಕರಾವಳಿ

ಟಿಸಿ ಕೇಳಲು ಶಾಲೆಗೆ ಬಂದ ವಿದ್ಯಾರ್ಥಿಗೆ ಮುಖ್ಯ ಶಿಕ್ಷಕರಿಂದ ಅವಮಾನ?; ವಿದ್ಯಾರ್ಥಿ ನೇಣಿಗೆ ಶರಣು..!

Pinterest LinkedIn Tumblr

ಉಡುಪಿ: ವರ್ಗಾವಣೆ ಪ್ರಮಾಣ ಪತ್ರ (ಟಿ.ಸಿ) ನೀಡಿಲ್ಲ ಎಂದು ಎಸ್​​ಎಸ್​ಎಲ್​ಸಿಯಲ್ಲಿ ಉತ್ತೀರ್ಣನಾಗಿದ್ದ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ.

ಟಿಸಿ ಕೊಟ್ಟಿಲ್ಲವೆಂದು ಬೈಂದೂರು ಸರ್ಕಾರಿ ಪ್ರೌಢಶಾಲೆಯ ಹೈಸ್ಕೂಲ್ ವಿದ್ಯಾರ್ಥಿ ನಿತಿನ್ (16) ಆತ್ಮಹತ್ಯೆಗೆ ಶರಣಾಗಿದ್ದಾನೆ. ಟಿಸಿ ಕೊಡದೆ ಮುಖ್ಯ ಶಿಕ್ಷಕರು ಬೈದಿದ್ದಾರೆ ಎಂದು ಡೆತ್​ ನೋಟ್ ಬರೆದಿಟ್ಟು ನಿತಿನ್ ಮನೆಯಲ್ಲಿ ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೈಂದೂರು ಸರಕಾರಿ ಪ್ರೌಢಶಾಲೆಯ ಹೈಸ್ಕೂಲ್ ವಿದ್ಯಾರ್ಥಿ ನಿತಿನ್ ಎಸ್​ಎಸ್​ಎಲ್​ಸಿ ಪಾಸ್ ಆಗಿದ್ದ. ಈ ಹಿನ್ನೆಲೆಯಲ್ಲಿ ಟಿಸಿ ಪಡೆದುಕೊಂಡು ಕಾಲೇಜಿಗೆ ಪ್ರವೇಶ ಪಡೆದುಕೊಳ್ಳಬೇಕಿತ್ತು. ಹೀಗಾಗಿ ಪಿಯುಸಿ ಸೇರ್ಪಡೆಯಾಗಲು ಟಿಸಿ ಪಡೆಯಲು ಶಾಲೆಗೆ ಹೋಗಿದ್ದಾನೆ. ಆದರೆ ಮುಖ್ಯ ಶಿಕ್ಷಕರು ಟಿಸಿ ಕೊಡದೆ ಬೈದಿದ್ದಾರೆ. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಬಗ್ಗೆ ಡೆತ್​ನಲ್ಲಿ ಉಲ್ಲೇಖಿಸಿದ್ದಾನೆ.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.