ಕರಾವಳಿ

ಬಿಜೆಪಿಯಿಂದ ಮಾಜಿ ಶಾಸಕ ಕೆ. ರಘುಪತಿ ಭಟ್‌ ಉಚ್ಚಾಟನೆ

Pinterest LinkedIn Tumblr

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ನೈರುತ್ಯ ಪದವೀಧರರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಉಡುಪಿಯ ಮಾಜಿ ಶಾಸಕ ಕೆ. ರಘುಪತಿ ಭಟ್‌ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಪಕ್ಷದ ಶಿಸ್ತು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್‌ ಆದೇಶಿಸಿದ್ದಾರೆ.

ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ವಿಧಾನಪರಿಷತ್ ಚುನಾವಣೆಗೆ ನೈರುತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Comments are closed.