ಕರಾವಳಿ

ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದ ಸಿಎಂ, ಡಿಸಿಎಂ

Pinterest LinkedIn Tumblr

ಮಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​ ಅವರು ಶನಿವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ದೇವರ ದರ್ಶನ ಪಡೆದ ನಂತರ ಧರ್ಮಸ್ಥಳದ ಧರ್ಮಾಧಿಕಾರಿಯಾದ ಡಾ.ವಿರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಕುಶಲೋಪರಿ ವಿಚಾರಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ‘ರಾಜ್ಯದಲ್ಲಿ ಉತ್ತಮ ಮಳೆ,ಬೆಳೆ ಆಗಲೆಂದು ಪ್ರಾರ್ಥನೆ ಮಾಡಿದ್ದೇವೆ. ನಮ್ಮ ಧರ್ಮದ ಸಂಪ್ರದಾಯದಂತೆ ಧರ್ಮಸ್ಥಳದ ಮಂಜುನಾಥ ಸ್ವಾಮಿಗೆ ನಮಸ್ಕಾರ ಹೇಳಲು ಬಂದಿದ್ದೇವೆ. ರಾಜ್ಯದ ಜನತೆ ಪರವಾಗಿ ಹಾಗೂ ವೈಯಕ್ತಿಕವಾಗಿ ಪ್ರಾರ್ಥನೆ ಮಾಡಿದ್ದೇನೆ ಎಂದರು.

ರಾಜ್ಯದ ನಾನಾ ಕಡೆಗಳಿಂದ ಶಕ್ತಿ ಯೋಜನೆ ಪ್ರಯೋಜನ ಪಡೆದು ಧರ್ಮಸ್ಥಳಕ್ಕೆ ಭಕ್ತರು ಬರುತ್ತಿದ್ದಾರೆಂದು ವೀರೇಂದ್ರ ಹೆಗ್ಗಡೆಯವರು ಹೇಳಿದ್ದಾರೆ. ದೇವಸ್ಥಾನದೊಳಗೆ ಇದ್ದ ಮಹಿಳಾ ಭಕ್ತರು ತಮಗೆ ಎರಡು ಸಾವಿರ ಸಿಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಅವರೆಲ್ಲರ ಆಶೀರ್ವಾದ ನಮಗೆ ಶಕ್ತಿ ತುಂಬಿದೆ ಎಂದರು.

 

Comments are closed.