ಕರ್ನಾಟಕ

ಎನ್.ಡಿ.ಎ ಮೈತ್ರಿಕೂಟದ ನಾಯಕರಾಗಿ ಮೋದಿ ಆಯ್ಕೆ; ಜೂನ್ 8ರಂದು ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ..?

Pinterest LinkedIn Tumblr

ನವದೆಹಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್‌ಡಿಎ) ನಾಯಕರಾಗಿ ನರೇಂದ್ರ ಮೋದಿ ಅವರನ್ನು ಬುಧವಾರ ಔಪಚಾರಿಕವಾಗಿ ಆಯ್ಕೆ ಮಾಡಲಾಗಿದ್ದು, ಜೂನ್ 8 ರಂದು ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಇಂದು (ಬುಧವಾರ) ಸಂಜೆ ದೆಹಲಿಯಲ್ಲಿ ನಡೆದ ಎನ್.ಡಿ.ಎ ನಾಯಕರ ಸಭೆಯಲ್ಲಿ ಸರ್ಕಾರ ರಚನೆ ಬಗ್ಗೆ ಚರ್ಚಿಸಿದ್ದು ನರೇಂದ್ರ ಮೋದಿ ಅವರನ್ನು ಮೈತ್ರಿಕೂಟದ ನಾಯಕರನ್ನಾಗಿ ಔಪಚಾರಿಕವಾಗಿ ಆಯ್ಕೆ ಮಾಡಿ ಮೋದಿ ಮೂರನೇ ಅವಧಿಗೆ ಪ್ರಧಾನಿಯಾಗುವ ಬಗ್ಗೆ ಘೋಷಿಸಲಾಯಿತು.

ಮೋದಿ ಅಧ್ಯಕ್ಷತೆಯಲ್ಲಿ ನಡೆದ ಎನ್ ಡಿಎ ಸಭೆಯಲ್ಲಿ ಟಿಡಿಪಿ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು, ಜೆಡಿಯು ಮುಖ್ಯಸ್ಥ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಶಿವಸೇನೆ ನಾಯಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಎಲ್‌ಜೆಪಿ(ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಸೇರಿದಂತೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಅಮಿತ್ ಶಾ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಈ ಸಭೆಯಲ್ಲಿ ಉಪಸ್ಥಿತರಿದ್ದರು.

ಟಿಡಿಪಿ 16, ಜೆಡಿಯು 12, ಶಿಂಧೆ ನೇತೃತ್ವದ ಶಿವಸೇನೆ 7 ಮತ್ತು ಎಲ್‌ಜೆಪಿ(ರಾಮ್ ವಿಲಾಸ್) ಐದು ಸ್ಥಾನಗಳನ್ನು ಗೆದ್ದು ಮೋದಿ ಮೂರನೇ ಬಾರಿಗೆ ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿವೆ.

Comments are closed.