ಕರಾವಳಿ

ತಲೆಮರೆಸಿಕೊಂಡಿದ್ದ ಪೋಕ್ಸೊ ಪ್ರಕರಣದ ಆರೋಪಿಯನ್ನು ಬಂಧಿಸಿದ ಅಮಾಸೆಬೈಲು ಪೊಲೀಸರು

Pinterest LinkedIn Tumblr

ಉಡುಪಿ: ಅಪ್ರಾಪ್ತ ಬಾಲಕಿಯನ್ನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದ ಆರೋಪಿಯನ್ನು ಅಮಾಸೆಬೈಲು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶ್ರೇಯಸ್ ನಾಯ್ಕ್(25) ಬಂಧಿತ ಆರೋಪಿ. ಮೇ.18 ರಂದು ಅಮಾಸೆಬೈಲು ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು.

ಅಪ್ರಾಪ್ತ ಬಾಲಕಿಯೊಬ್ಬಳನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಆರೋಪಿಸಲಾಗಿದ್ದು ದೂರು ದಾಖಲಾಗುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದ. ಪೋಕ್ಸೋ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಪತ್ತೆಗೆ ತಂಡ ರಚಿಸಿದ್ದು ಖಚಿತ ಮಾಹಿತಿಯಂತೆ ಜೂ.7ರಂದು ಬಂಧಿಸಿದ್ದಾರೆ. ಆರೋಪಿ ಬಂಧನದ ಬಗ್ಗೆ ಉಡುಪಿ‌ ಎಸ್ಪಿ ಡಾ. ಅರುಣ್ ಕೆ. ಸ್ಪಷ್ಟಪಡಿಸಿದ್ದು ಕಾನೂನು ಪ್ರಕ್ರಿಯೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.

Comments are closed.