ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್ ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರು, ಶಾಸಕರಿಂದ ಒತ್ತಡವಿಲ್ಲ: ಸಿಎಂ

Pinterest LinkedIn Tumblr

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್ ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರಿಂದ, ಶಾಸಕರಿಂದ ಒತ್ತಡವಿಲ್ಲ. ನನ್ನ ಮೇಲೆ ಒತ್ತಡ ಹಾಕಿದರೆ ಅವೆಲ್ಲವನ್ನೂ ನಾನು ಕೇಳುವುದೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ನೆಲದ ಕಾನೂನು ಏನು ಹೇಳುತ್ತದೆಯೋ ಅದರಂತೆ ತನಿಖೆಯಾಗುತ್ತದೆ. ಇದರಲ್ಲಿ ಒತ್ತಡವೋ ಇನ್ನೊಂದೋ ಈ ಯಾವುದಕ್ಕೂ ನಾನು ಗಮನ ಕೊಡುವವನಲ್ಲ. ಪೊಲೀಸರಿಗೆ ಪ್ರಕರಣದ ತನಿಖೆಯಲ್ಲಿ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ.

ಎಸ್.‌ಪಿ.ಪಿ ಬದಲಾವಣೆಯ ಪ್ರಸ್ತಾವನೆ ನನ್ನ ಮುಂದೆ ಈವರೆಗೂ ಬಂದೇ ಇಲ್ಲ. ಇದಕ್ಕೆ ಸಂಬಂಧಪಟ್ಟಂತೆ ಈಗ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವುದು ಕಲ್ಪಿತ ವರದಿಗಳು. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Comments are closed.