ಕರಾವಳಿ

ಬೈಂದೂರು: ಎಸ್.ಡಿ.ಎಂ.ಸಿ ಸಮನ್ವಯ ವೇದಿಕೆ ಉಡುಪಿ ಜಿಲ್ಲಾ ವೇದಿಕೆಯಿಂದ ಮೂವರು ವಿದ್ಯಾರ್ಥಿಗಳಿಗೆ ಸನ್ಮಾನ

Pinterest LinkedIn Tumblr

ಬೈಂದೂರು: ಕರ್ನಾಟಕ ರಾಜ್ಯ ಎಸ್.ಡಿ.ಎಂ.ಸಿ ಸಮನ್ವಯ ವೇದಿಕೆ ಉಡುಪಿ ಜಿಲ್ಲಾ ವೇದಿಕೆ ವತಿಯಿಂದ ಸರಕಾರಿ ಶಾಲೆಯಲ್ಲಿ ಓದಿ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕ ಪಡೆದ ಮೂವರು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಗೌರವದಿಂದ ಸನ್ಮಾನಿಸಲಾಯಿತು.

580 ಅಂಕ ಪಡೆದ ಕೀರ್ತಿಕ ಶೆಟ್ಟಿ ಜೋಗುರು, 567 ಅಂಕ ಪಡೆದ ಮಹಾಲಕ್ಷ್ಮಿ ಸಾತೋಡಿ, 573 ಅಂಕ ಪಡೆದ

ಸಮರ್ಥ ಸಾತೋಡಿ ಅವರನ್ನು ಸಮನ್ವಯ ವೇದಿಕೆ ಜಿಲ್ಲಾ ಉಡುಪಿ ಜಿಲ್ಲಾ ವೇದಿಕೆ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಸಮನ್ವಯ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷೆ ಜ್ಯೋತಿ ಜಯರಾಮ್ ಶೆಟ್ಟಿ ಮಾತನಾಡಿ ಸರಕಾರಿ ಶಾಲೆ ಉಳಿಯಲಿ ಬೆಳೆಯಲಿ ನೆರೆಹೊರೆಯ ಸಮಾನ ಶಾಲೆಯಾಗಲಿ ಎಂದರು.

ಜಿಲ್ಲಾ ಸಂಚಾಲಕ ಹರಿಶ್ಚಂದ್ರ ಆಚಾರ್ಯ, ಜಿಲ್ಲಾ ಸಹ ಕಾರ್ಯದರ್ಶಿ ಸುಮಾ ಆಚಾರ್ಯ, ಎಸ್.ಡಿ.ಎಂ.ಸಿ ಉಪಾಧ್ಯಕ್ಷ ವಿನೋದ್ ಪೂಜಾರಿ ಸಾತೋಡಿ, ಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು.

Comments are closed.