ಕರ್ನಾಟಕ

ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ: ಪ್ರಕರಣದ ತನಿಖೆ ಸಿಐಡಿಗೆ..!

Pinterest LinkedIn Tumblr

ಬೆಂಗಳೂರು: ಬಲವಂತಾಗಿ ಅಸಹಜ ಲೈಂಗಿಕ ಕ್ರಿಯೆ (ಸಲಿಂಗ ಕಾಮ) ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದ ಸಂಬಂಧ ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ರಾತ್ರಿ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರವಾಗಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಹಾಜರಾಗಿದ್ದರು. ಪ್ರಕರಣದ ಸಂಬಂಧ ಸೂರಜ್‌ರೇವಣ್ಣ ಅವರನ್ನು ಪೊಲೀಸರು ಭಾನುವಾರ ಬೆಳಿಗ್ಗೆ 4 ಗಂಟೆ ವರೆಗೂ ತೀವ್ರ ವಿಚಾರಣೆಗೆ ಒಳಪಡಿಸಿದ್ದು ನಂತರ ಬಂಧಿಸಲಾಗಿದೆ.

ಇನ್ನು ಈ ಪ್ರಕರಣವನ್ನು ಸಿಐಡಿಗೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ. ಗಂಭೀರವಾದ ಆರೋಪ ಪ್ರಕರಣವಾಗಿರುವುದರಿಂದ ಕೂಲಂಕಷವಾಗಿ ತನಿಖೆ ಮಾಡುತ್ತೇವೆ. ಸೂರಜ್ ರೇವಣ್ಣ ದಾಖಲಿಸಿರುವ ಪ್ರತಿ ದೂರಿನ ಬಗ್ಗೆ ಸಹ ಪೊಲೀಸರು ತನಿಖೆ ಮಾಡುತ್ತಾರೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಆರೋಪಿ ಸೂರಜ್ ರೇವಣ್ಣ ಅವರನ್ನು ಬೆಂಗಳೂರಿಗೆ ಕರೆತರಲಾಗಿದ್ದು, ಜನಪ್ರತಿನಿಧಿಗಳ ನ್ಯಾಯಾಲಯದ ಜಡ್ಜ್ ಎದುರು ಹಾಜರುಪಡಿಸಲಾಗಿದೆ.

Comments are closed.