ಕರಾವಳಿ

ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನ

Pinterest LinkedIn Tumblr

ಬೆಂಗಳೂರು: ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ಅವರು ಶುಕ್ರವಾರ ಹೃದಯಘಾತದಿಂದ ನಿಧನ ಹೊಂದಿದರು.

ಇರಾ (ಕುಂಡಾವು), ಕೂಡ್ಲು, ಮೂಲ್ಕಿ, ಕರ್ನಾಟಕ ಮೇಳ ಮತ್ತು ಧರ್ಮಸ್ಥಳ ಮೇಳದಲ್ಲಿ ಯಕ್ಷಗಾನ ಪಾತ್ರ ಮಾಡಿದ ಕುಂಬಳೆ ಶ್ರೀಧರ್ ರಾವ್ ಅವರು ತೆಂಕುತಿಟ್ಟಿನ ಅಪ್ರತಿಮ ಸ್ತ್ರೀವೇಷಧಾರಿಯಾಗಿ ಕಲಾಸೇವೆ ಮಾಡಿದ್ದರು. ದಮಯಂತಿ, ದಾಕ್ಷಾಯಿಣಿ, ಅಮ್ಮು ಬಲ್ಲಾಳ್ತಿ, ಲಕ್ಷ್ಮಿ, ಸುಭದ್ರೆ, ಸತ್ಯಭಾಮೆ ಅಲ್ಲದೆ ಪ್ರಮೀಳೆ, ಶಶಿಪ್ರಭೆ ಮೊದಲಾದ ಪ್ರಮುಖ ಸ್ತ್ರೀ ಪಾತ್ರಗಳಿಂದ ಹೆಸರುವಾಸಿಯಾಗಿದ್ದರು.

ಮಾಲಿಂಗ ಮುಕಾರಿ ಮತ್ತು ಕಾವೇರಿ ದಂಪತಿಗಳ ಪುತ್ರನಾಗಿ ಶ್ರೀಧರ ರಾಯರು 1948ರ ಜುಲೈ 23ರಂದು ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ನಾಯ್ಕಾಪುವಿನಲ್ಲಿ ಜನಿಸಿದರು. 1962ರಲ್ಲಿ ಕಲ್ಲಾಡಿ ಕೊರಗ ಶೆಟ್ಟರ ಯಜಮಾನಿಕೆಯ ಕುಂಡಾವು ಮೇಳಕ್ಕೆ ಶ್ರೀಧರ ರಾಯರು ಬಾಲಕಲಾವಿದನಾಗಿ ಸೇರ್ಪಡೆಗೊಂಡು ನಂತರ ಕೂಡ್ಲು, ಮೂಲ್ಕಿ, ಕರ್ನಾಟಕ ಮೇಳ ಮತ್ತು ಧರ್ಮಸ್ಥಳ ಮೇಳಗಳಲ್ಲಿ ಕುಂಬಳೆ ಶ್ರೀಧರ ರಾಯರು ಕಲಾಸೇವೆ ಮಾಡಿದವರು. ಧರ್ಮಸ್ಥಳ ಮೇಳದಲ್ಲಿ ಸುಮಾರು ನಾಲ್ಕು ದಶಕಗಳ ಕಾಲ ತಿರುಗಾಟ ಮಾಡಿದ್ದರು.

Comments are closed.