ಕರಾವಳಿ

ಬಿಲ್ಲವ ಸಮಾಜಸೇವಾ ಸಂಘ ಕುಂದಾಪುರ: ನೂತನ ಸಂಸದ ಕೋಟ ಅವರಿಗೆ ಅಭಿನಂದನೆ, 32ನೇ ವರ್ಷದ ವಿದ್ಯಾರ್ಥಿ ಸಹಾಯಧನ ವಿತರಣಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Pinterest LinkedIn Tumblr

ಕುಂದಾಪುರ: ಬಿಲ್ಲವ ಸಮಾಜಸೇವಾ ಸಂಘ ಕುಂದಾಪುರದ ವತಿಯಿಂದ ಜುಲೈ 28 ರಂದು ಹಮ್ಮಿಕೊಳ್ಳಲಾಗಿರುವ ನೂತನ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಅಭಿನಂದನೆ ಸಮಾರಂಭ ಹಾಗೂ 32ನೇ ವರ್ಷದ ವಿದ್ಯಾರ್ಥಿ ಸಹಾಯಧನ ವಿತರಣಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜು.7 ರವಿವಾರ ಕುಂದಾಪುರದ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಜರುಗಿತು.

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ ಮಾತನಾಡಿ, ಶ್ರೀ ನಾರಾಯಣ ಗುರುಗಳು ಹಾಕಿಕೊಟ್ಟ ಮಾರ್ಗದರ್ಶನದಂತೆ ಸಂಘಟನೆ ಪೂರಕವಾಗಿ ಕೆಲಸ ಮಾಡುತ್ತಿದೆ. ಶೈಕ್ಷಣಿಕ ಪ್ರೋತ್ಸಾಹದ ನಿಟ್ಟಿನಲ್ಲಿ ಕಳೆದ ಮೂರು ದಶಕಗಳಿಂದ ಸಂಘದಿಂದ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಿಸಲಾಗುತ್ತಿದೆ ಎಂದರು.

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಉಪಾಧ್ಯಕ್ಷರಾದ ರಾಮ ಪೂಜಾರಿ ಮುಲ್ಲಿಮನೆ, ಶಿವರಾಮ ಪೂಜಾರಿ ಬಸ್ರೂರು, ಕೋಶಾಧಿಕಾರಿ ರಮೇಶ ಪೂಜಾರಿ ಮೇಲಹಿತ್ಲು, ಶ್ರೀ ನಾರಾಯಣ ಗುರು ಯುವಕ ಮಂಡಲದ ಅಧ್ಯಕ್ಷ ಸಂದೇಶ ಪೂಜಾರಿ ಬೀಜಾಡಿ, ಪ್ರಧಾನ ಕಾರ್ಯದರ್ಶಿ ರಮೇಶ್ ಪೂಜಾರಿ ಮದ್ದುಗುಡ್ಡೆ, ಬಿಲ್ಲವ ಮಹಿಳಾ ಘಟಕದ ಅಧ್ಯಕ್ಷೆ ಗಿರಿಜಾ ಮಾಣಿಗೋಪಾಲ್ ಮೊದಲಾದವರಿದ್ದರು.

ವಿನಯ್ ಪೂಜಾರಿ ಬನ್ನಾಡಿ ಸ್ವಾಗತಿಸಿ, ಯೋಗೇಶ್ ಪೂಜಾರಿ ಕೋಡಿ ವಂದಿಸಿದರು.

Comments are closed.