ಕರ್ನಾಟಕ

ಕಿಚ್ಚ ಸುದೀಪ್ ತಾಯಿ ಸರೋಜಾ ಸಂಜೀವ್ ಅನಾರೋಗ್ಯದಿಂದ ವಿಧಿವಶ

Pinterest LinkedIn Tumblr

ಬೆಂಗಳೂರು: ನಟ, ನಿರೂಪಕ ಕಿಚ್ಚ ಸುದೀಪ್‌ ಅವರ ತಾಯಿ ಸರೋಜಾ ಸಂಜೀವ್‌ ಅವರು ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸರೋಜಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅ.20 ರವಿವಾರ ನಿಧನರಾಗಿದ್ದಾರೆ.

ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್‌ ಅವರು ಬೆಳಗ್ಗೆ 7 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕೆಲವು ಸಮಯದಿಂದ ಸರೋಜಾ ಅವರು ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸರೋಜಾ ಸಂಜೀವ್ ಅವರು ಕೊನೆಯುಸಿರೆಳೆದಿದ್ದಾರೆ.

ಕಿಚ್ಚ ಸುದೀಪ್ ತಾಯಿಯ ಬಗ್ಗೆ ಆಗಾಗ ವೇದಿಕೆ ಮೇಲೆ ಹೇಳಿಕೊಂಡಿದ್ದರು. ಇತ್ತೀಚೆಗಷ್ಟೆ ಬಿಗ್​ಬಾಸ್ ವೇದಿಕೆ ಮೇಲೆ ಸುದೀಪ್ ಅವರು ಅವರ ತಾಯಿಯನ್ನು ನೆನಪಿಸಿಕೊಂಡಿದ್ದರು. ಕಿಚ್ಚ ಸುದೀಪ್ ಕುಟುಂಬದಲ್ಲಿ ಶೋಕ ಮನೆ ಮಾಡಿದೆ.

ಸರೋಜಾ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್​ರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ.

Comments are closed.