ಉಡುಪಿ: ಸ್ಕೂಟರ್‌ವೊಂದರಲ್ಲಿ ಸವಾರ ಸಹಿತ ಐದು ಮಂದಿ ಹೋಗುವ ದೃಶ್ಯ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೆ ಉಡುಪಿಯ ಮಣಿಪಾಲ ಪೊಲೀಸರು ಸ್ಕೂಟರ್ ಪತ್ತೆ ಮಾಡಿ ಸಂಬಂದಪಟ್ಟವರ ವಿರುದ್ಧ ಕಾನೂನು ಕ್ರಮಕೈಗೊಂಡಿದ್ದಾರೆ.
ಎ. 17 ರಂದು ರಾತ್ರಿ ಸಮಯ ಮಣಿಪಾಲ ವ್ಯಾಪ್ತಿಯಲ್ಲಿ ಓರ್ವ ಸ್ಕೂಟರ್ ಸವಾರನು ಇತರ ನಾಲ್ಕು ಜನ ಸಹ ಸವಾರರನ್ನು ಸ್ಕೂಟರ್‌ನಲ್ಲಿ ಕುಳ್ಳಿರಿಸಿಕೊಂಡು ಮಾನವ ಜೀವಕ್ಕೆ ಅಪಾಯಕಾರಿ ರೀತಿಯಲ್ಲಿ ಸವಾರಿ ಮಾಡಿಕೊಂಡು ಹೋದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ತನಿಖೆ ಕೈಗೊಂಡ ಪೊಲೀಸರು ರವಿವಾರದಂದು ಸ್ಕೂಟರ್ ಸವಾರರನ್ನು ಮತ್ತು ಸ್ಕೂಟರ್‌ನ್ನು ಪತ್ತೆಹಚ್ಚಿದ್ದಾರೆ. ಸ್ಕೂಟರ್ ಸವಾರರು ಮಣಿಪಾಲದ ಮಾಹೆಯ ಇಬ್ಬರು ವಿದ್ಯಾರ್ಥಿಗಳು ಮತ್ತು ಮೂವರು ಅಪ್ರಾಪ್ತ ವಿದ್ಯಾರ್ಥಿಗಳಾಗಿರುವುದು ತಿಳಿದು ಬಂದಿದೆ. ಸ್ಕೂಟರ್ ಚಾಲನೆ ಮಾಡುತ್ತಿದ್ದ ಸವಾರನಿಗೆ ಮೋಟಾರು ವಾಹನ ಕಾಯ್ದೆಯನ್ನು ಉಲ್ಲಂಘಿಸಿ ಅಪಾಯಕಾರಿಯಾಗಿ ವಾಹನ ಚಾಲನೆ ಮಾಡಿದ್ದಕ್ಕಾಗಿ 10,500 ರೂ. ದಂಡ ವಿಧಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Comments are closed.