ಪ್ರಮುಖ ವರದಿಗಳು

7 ದಿನದ ಹಿಂದೆ ಮದುವೆ ಆಗಿತ್ತು: ಪತ್ನಿ ಎದುರಲ್ಲೇ ಪ್ರಾಣಬಿಟ್ಟ ನೌಕಾಪಡೆಯ ಯೋಧ

Pinterest LinkedIn Tumblr

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಹರಿಯಾಣದ ಕರ್ನಾಲ್‌ನ 26 ವರ್ಷದ ಭಾರತೀಯ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ದುರಂತ ಸಾವನ್ನಪ್ಪಿದ್ದಾರೆ. ನರ್ವಾಲ್ ಇತ್ತೀಚೆಗೆ ವಿವಾಹವಾಗಿದ್ದು ರಜೆಗಾಗಿ ಕಾಶ್ಮೀರಕ್ಕೆ ತೆರಳಿದ್ದರು.

ಕೊಚ್ಚಿಯಲ್ಲಿ ನಿಯೋಜನೆಗೊಂಡಿದ್ದ ವಿನಯ್ ಏಪ್ರಿಲ್ 16 ರಂದು ವಿವಾಹವಾಗಿದ್ದರು. ನಂತರ ಅಲ್ಪ ರಜೆಗಾಗಿ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದ್ದರು ಎಂದು ರಕ್ಷಣಾ ಅಧಿಕಾರಿಗಳು ದೃಢಪಡಿಸಿದ್ದಾರೆ. ಅವರ ವಿವಾಹ ಆರತಕ್ಷತೆ ಏಪ್ರಿಲ್ 19 ರಂದು ನಡೆಯಿತು. ಮೂಲಗಳ ಪ್ರಕಾರ ನವ ದಂಪತಿಗಳು ಪಹಲ್ಗಾಮ್‌ನಲ್ಲಿ ಹನಿಮೂನ್‌ಗೆ ತೆರಳಿದ್ದರು ಎನ್ನಲಾಗಿದೆ.

ನರ್ವಾಲ್ ಕೇವಲ ಎರಡು ವರ್ಷಗಳ ಹಿಂದೆ ನೌಕಾಪಡೆಗೆ ಸೇರಿದ್ದರು ಮತ್ತು ಕೊಚ್ಚಿಯಲ್ಲಿ ನಿಯೋಜನೆಗೊಂಡಿದ್ದರು. ಅವರ ಸಾವು ಅವರ ಕುಟುಂಬಕ್ಕೆ ಆಘಾತ ಬಡಿದಂತಾಗಿದೆ. ಅವರು 4 ದಿನಗಳ ಹಿಂದೆ ವಿವಾಹವಾಗಿದ್ದರು. ಎಲ್ಲರೂ ಸಂತೋಷವಾಗಿದ್ದರು. ಅವರನ್ನು ಭಯೋತ್ಪಾದಕರು ಕೊಂದಿದ್ದಾರೆ, ಅವರು ಸ್ಥಳದಲ್ಲೇ ನಿಧನರಾದರು ಎಂಬ ಮಾಹಿತಿ ನಮಗೆ ಬಂದಿದೆ ಎಂದು ಹೇಳಿದ್ದಾರೆ.

ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಪ್ರದೇಶದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಈ ಘಟನೆಯು ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

Comments are closed.